HomeKarnatakaBIG NEWS: ಪಿಎಸ್ಐ ಪರಶುರಾಮ್ ಅನುಮಾನಾಸ್ಪದ ಸಾವು ಕೇಸ್: ಶಾಸಕ ಹಾಗೂ ಪುತ್ರನ ವಿರುದ್ಧ ಗಂಭೀರ...

BIG NEWS: ಪಿಎಸ್ಐ ಪರಶುರಾಮ್ ಅನುಮಾನಾಸ್ಪದ ಸಾವು ಕೇಸ್: ಶಾಸಕ ಹಾಗೂ ಪುತ್ರನ ವಿರುದ್ಧ ಗಂಭೀರ ಆರೋಪ; ದೂರು ದಾಖಲು

ಯಾದಗಿರಿ: ಯಾದಗಿರಿ ನಗರದ ಪಿಎಸ್ಐ ಪರಶುರಾಮ್ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಕಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಪುತ್ರನ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ.

ಪಿಎಸ್ಐ ಪರಶುರಾಮ್ ಸಾವಿಗೆ ಶಾಸಕ ಚೆನ್ನಾರೆಡ್ಡಿ ಹಾಗೂ ಪುತ್ರ ಪಂಪನಗೌಡ ಕಾರಣ ಎಂದು ಪರಶುರಾಮ್ ಕುಟುಂಬದವರು ಆರೋಪಿಸಿದ್ದಾರೆ. ಈ ನಿಟ್ಟಿನಲ್ಲಿ ಸೂಕ್ತ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.

ಪೋಸ್ಟಿಂಗ್ ಗಾಗಿ ಶಾಸಕ ಚೆನ್ನಾರೆಡ್ಡಿ ಲಕ್ಷ ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರು. ನಿಯಮ ಬಾಹಿರವಾಗಿ ಅವರನ್ನು ವರ್ಗಾವಣೆ ಮಾಡಿದ್ದರಿಂದ ತೀವ್ರವಾಗಿ ಮನನೊಂದಿದ್ದರು. ಒತ್ತಡದಿಂದಾಗಿ ಅವರಿಗೆ ಹೃದಯಾಘಾತವಾಗಿದೆ. ಯಾದಗಿರಿ ಶಾಸಕ ಚೆನ್ನಾರೆಡ್ಡಿಗೆ ಹಣದ ಆಸೆ ಇದೆ. ಪರಶುರಾಮ್ ಜಾಗಕ್ಕೆ ಹೊಸಬರು ಬಂದಿದ್ದಾರೆ. ಅವರು ಹಣ ನಿಡಿಯೇ ಬಂದಿದ್ದಾರೆ ಎಂದು ಪರಶುರಾಮ್ ಮಾವ ವೆಂಕಟಸ್ವಾಮಿ ಹಾಗೂ ಪತ್ನಿ ಶ್ವೇತಾ ಆರೋಪಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಿಎಸ್ಐ ಹುದ್ದೆ ಪಡೆಯಲು ಪರಶುರಾಮ್ 30 ಲಕ್ಷ ರೂಪಾಯಿ ನೀಡಿದ್ದಾರೆ. ಹುದ್ದೆಗಾಗಿ ಬಹಳ ಸಾಲ ಮಾಡಿದ್ದರು. ಈಗ ಒಂದು ವರ್ಷ ಪೂರೈಸುವ ಮೊದಲೇ ಯಾದಗಿರಿಯ ಸೈಬರ್ ಕ್ರೈಂ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಇದರಿಂದ ಖಿನ್ನತೆಗೆ ಒಳಗಾಗಿದ್ದರು. ಇದೇ ಕಾರಣಕ್ಕೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.

ಪೋಸ್ಟಿಂಗ್ ಗಾಗಿ ಪದೇ ಪದೇ ಹಣಕ್ಕಾಗಿ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ಶಾಸಕರ ವಿರುದ್ಧ ಹಾಗೂ ಶಾಸಕನ ಪುತ್ರನ ವಿರುದ್ಧ ಪಿಎಸ್ಐ ಪರಶುರಾಮ್ ಪತ್ನಿ ಶ್ವೇತಾ ಯಾದಗಿರಿ ಎಸ್ ಪಿ ಸಂಗೀತಾ ಅವರಿಗೆ ದೂರು ನೀಡಿದ್ದಾರೆ. ಸೂಕ್ತ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular