ಯಾದಗಿರಿ: ಬಿರುಗಾಳಿ ಮಳೆಗೆ ವಿದ್ಯುತ್ ಕಂಬಗಳು ಮನೆಗಳ ಮೇಲೆ ಉರುಳಿ ಬಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಹಲವು ಮನೆಗಳಿಗೆ ಬೆಂಕಿ ಹೊತ್ತಿಕೊಂಡಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಜಾಲಿಬೆಂಚಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಅವಘಡ ಸಂಭವಿಸಿದೆ. ಹಲವು ಮನೆಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಟಿವಿ, ಫ್ರಿಡ್ಜ್, ಫ್ಯಾನ್ ಗಳು ಹಾನಿಯಾಗಿವೆ. ಬೆಂಕಿ ಅವಘಡ ಸಂಭವಿಸುತ್ತಿದ್ದಂತೆ ಜನರು ಮನೆಗಳಿಂದ ಹೊರಗೋಡಿಬಂದು ಜೀವ ಉಳಿಸಿಕೊಂಡಿದ್ದಾರೆ.
ಬಿರುಗಾಳಿಯಿಂದಾಗಿ ವಿದ್ಯುತ್ ಕಂಬಗಳು ಧರಾಶಾಹಿಯಾಗಿದ್ದು, ವಿದ್ಯುತ್ ತಂತಿ ಒಂದಕ್ಕೊಂದು ತಾಗಿ ಬೆಂಕಿ ಹೊತ್ತಿಕೊಂಡಿದೆ. ಘಟನೆಯಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಗ್ರಾಮಸ್ಥರು ಜೆಸ್ಕಾಂ ಗೆ ಮಾಹಿತಿ ನೀಡುತ್ತಿದ್ದಂತೆ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಿದ್ದಾರೆ.