HomeKarnatakaಬಿರುಗಾಳಿಗೆ ವಿದ್ಯುತ್ ಕಂಬ ಉರುಳಿಬಿದ್ದು ಶಾರ್ಟ್ ಸರ್ಕ್ಯೂಟ್: ಮನೆಗಳಿಗೆ ಹೊತ್ತಿಕೊಂಡ ಬೆಂಕಿ

ಬಿರುಗಾಳಿಗೆ ವಿದ್ಯುತ್ ಕಂಬ ಉರುಳಿಬಿದ್ದು ಶಾರ್ಟ್ ಸರ್ಕ್ಯೂಟ್: ಮನೆಗಳಿಗೆ ಹೊತ್ತಿಕೊಂಡ ಬೆಂಕಿ

ಯಾದಗಿರಿ: ಬಿರುಗಾಳಿ ಮಳೆಗೆ ವಿದ್ಯುತ್ ಕಂಬಗಳು ಮನೆಗಳ ಮೇಲೆ ಉರುಳಿ ಬಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಹಲವು ಮನೆಗಳಿಗೆ ಬೆಂಕಿ ಹೊತ್ತಿಕೊಂಡಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಜಾಲಿಬೆಂಚಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಅವಘಡ ಸಂಭವಿಸಿದೆ. ಹಲವು ಮನೆಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಟಿವಿ, ಫ್ರಿಡ್ಜ್, ಫ್ಯಾನ್ ಗಳು ಹಾನಿಯಾಗಿವೆ. ಬೆಂಕಿ ಅವಘಡ ಸಂಭವಿಸುತ್ತಿದ್ದಂತೆ ಜನರು ಮನೆಗಳಿಂದ ಹೊರಗೋಡಿಬಂದು ಜೀವ ಉಳಿಸಿಕೊಂಡಿದ್ದಾರೆ.

ಬಿರುಗಾಳಿಯಿಂದಾಗಿ ವಿದ್ಯುತ್ ಕಂಬಗಳು ಧರಾಶಾಹಿಯಾಗಿದ್ದು, ವಿದ್ಯುತ್ ತಂತಿ ಒಂದಕ್ಕೊಂದು ತಾಗಿ ಬೆಂಕಿ ಹೊತ್ತಿಕೊಂಡಿದೆ. ಘಟನೆಯಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಗ್ರಾಮಸ್ಥರು ಜೆಸ್ಕಾಂ ಗೆ ಮಾಹಿತಿ ನೀಡುತ್ತಿದ್ದಂತೆ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular