ಯಾದಗಿರಿ: ವಸತಿ ನಿಲಯದಲ್ಲಿ ಊಟ ಸೇವಿಸಿದ್ದ 28 ವಿದ್ಯಾರ್ಥಿನಿಯರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಿಠಕಲ್ ಪಟ್ಟಣದಲ್ಲಿ ನಡೆದಿದೆ.
ಇಲ್ಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬಾಲಕಿಯರ ಹಾಸ್ಟೇಲ್ ನಲ್ಲಿ ಈ ಘಟನೆ ನಡೆದಿದೆ. ರಾತ್ರಿ ಹಾಸ್ಟೆಲ್ ನಲ್ಲಿ ಊಟ ಸೇವಿಸಿದ್ದ 28 ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದು, ಅವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ.
ಊಟ ಸೇವಿಸಿದ ಕೆಲವೇ ಸಮಯದಲ್ಲಿ ವಾಂತಿ ಹಾಗೂ ತಲೆ ಸುತ್ತಿನಿಂದ ವಿದ್ಯಾರ್ಥಿನಿಯರು ಬಳಲಿದ್ದಾರೆ. ತಕ್ಷಣವೇ ಅವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಸ್ಥಿತಿಯಲ್ಲಿರುವ ಮೂವರು ವಿದ್ಯಾರ್ಥಿನಿಯರನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
