HomeKarnatakaBREAKING: ಮತದಾನದ ವೇಳೆ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ, ಕಲ್ಲುತೂರಾಟ; ಓರ್ವನ ಸ್ಥಿತಿ ಗಂಭೀರ

BREAKING: ಮತದಾನದ ವೇಳೆ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ, ಕಲ್ಲುತೂರಾಟ; ಓರ್ವನ ಸ್ಥಿತಿ ಗಂಭೀರ

ಯಾದಗಿರಿ: ಲೋಕಸಭಾ ಚುನಾವಣೆ ನಡುವೆ ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಮತದಾನದ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ.

ಸುರಪುರ ತಾಲೂಕಿನ ಬಾದ್ಯಾಪುರ ಗ್ರಾಮದ ಮತಗಟ್ಟೆಯಲ್ಲಿ ಮತದಾನದ ವೇಳೆ ಗಲಾಟೆ ನಡೆದು, ಕಲ್ಲುತೂರಾಟ ನಡೆಸಲಾಗಿದೆ. ಕಲ್ಲು ತೂರಾಟದಿಂದಾಗಿ ಸ್ಥಳದಲ್ಲಿದ್ದ ಮೂವರು ಗಾಯಗೊಂಡಿದ್ದು, ಓರ್ವನ ತಲೆಗೆ ಬಲವಾದ ಪೆಟ್ಟು ಬಿದ್ದು ತಲೆಯಿಂದ ರಕ್ತ ಚಿಮ್ಮಿದೆ. ಆತನ ಸ್ಥಿತಿ ಗಂಭೀರವಾಗಿದೆ.

ಮತಗಟ್ಟೆ ಬಳಿ ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಪೊಲೀಸರು ಉದ್ರಿಕ್ತರನ್ನು ಚದುರಿಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular