HomeKarnatakaBIG NEWS: ರಸ್ತೆ ಬದಿ ನಿಂತಿದ್ದ ಯುವಕನ ಮೇಲೆ ಹರಿದ ಟಿಪ್ಪರ್; ವ್ಯಕ್ತಿ ಸ್ಥಳದಲ್ಲೇ ದುರ್ಮರಣ

BIG NEWS: ರಸ್ತೆ ಬದಿ ನಿಂತಿದ್ದ ಯುವಕನ ಮೇಲೆ ಹರಿದ ಟಿಪ್ಪರ್; ವ್ಯಕ್ತಿ ಸ್ಥಳದಲ್ಲೇ ದುರ್ಮರಣ

ಯಾದಗಿರಿ: ರಸ್ತೆ ಬದಿ ನಿಂತಿದ್ದ ಯುವಕನ ಮೇಲೆ ಟಿಪ್ಪರ್ ವಾಹನ ಹಿರಿದು, ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ನಡೆದಿದೆ.

ಸಾಹಿಲ್ ಪಟೇಲ್ (18) ಮೃತ ದುರ್ದೈವಿ. ಟಿಪ್ಪರ್ ಚಾಲಕ ಜೀವನ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಟಿಪ್ಪರ್ ಚಾಲಕ ಜೀವನ್ ಕುಡಿದ ಮತ್ತಿನಲ್ಲಿ ತಡರಾತ್ರಿ ಅಡ್ಡಾದಿಡ್ದಿಯಾಗಿ ಟಿಪ್ಪರ್ ಓಡಿಸುತ್ತಿದ್ದ. ಮೊದಲು ಟ್ರ್ಯಾಕ್ಟರ್, ಮರ, ವಿದ್ಯುತ್ ಕಂಬಕ್ಕೆ ಟಿಪ್ಪರ್ ಡಿಕ್ಕಿ ಹೊಡೆದಿದೆ. ಬಳಿಕ ರಸ್ತೆ ಪಕ್ಕದಲ್ಲಿ ನಿಂತಿದ್ದ ಸಾಹಿಲ್ ಪಟೇಲ್ ಮೇಲೆ ಟಿಪ್ಪರ್ ಹರಿದಿದೆ. ಅಪಘಾತದ ಬಳಿಕ ಟಿಪ್ಪರ್ ಸಮೇತ ಪರಾರಿಯಾಗಲು ಚಾಲಕ ಯತ್ನಿಸಿದ್ದ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವೇಳೆ ಟಿಪ್ಪರ್ ಮೇಲೆ ಕಲ್ಲುತೂರಾಟ ನಡೆಸಿದ ಸ್ಥಳೀಯರು ಚಾಲಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular