ದ್ವಜಾರೋಹಣದ ವೇಳೆ ಅವಘಡ; ಕುಸಿದು ಬಿದ್ದ ಮೂವರು ವಿದ್ಯಾರ್ಥಿಗಳು

ಯಾದಗಿರಿ: 77ನೇ ಸ್ವಾತಂತ್ರ್ಯೋತ್ಸವ ಸಂಭ್ರಮ ದೇಶದಾದ್ಯಂತ ಮನೆ ಮಾಡಿದೆ. ಕರ್ನಾಟಕದ ಜಿಲ್ಲಾ ಕೇಂದ್ರಗಳಲ್ಲಿ, ಶಾಲಾ-ಕಾಲೇಜುಗಳಲ್ಲಿ ಧ್ವಜಾರೋಹಣ ನೆರವೇರಿಸಿ ಸಂಭ್ರಮದಿಂದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದೆ. ಈ ವೇಳೆ ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣದ ವೇಳೆ ಅವಘಡ ಸಂಭವಿಸಿದೆ.

ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಧ್ವಜಾರೋಹಣದ ವೇಳೆ ಪರೇಡ್ ನಿರ್ಗಮನ ಮಾಡುತ್ತಿದ್ದಾಗ ಮೂವರು ಶಾಲಾ ವಿದ್ಯಾರ್ಥಿಗಳು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ಧ್ವಜಾರೋಹಣ ನೆರವೇರಿಸಿದ್ದರು. ಬಳಿಕ ಪಥಸಂಚಲನ ನಡೆದ ದಳದಲ್ಲಿ ಆದರ್ಶ ಶಾಲೆಯ ವಿದಾರ್ಥಿಗಳು ಪಾಲ್ಗೊಂಡಿದ್ದರು. ವಿವಿಧ ದಳಗಳಲ್ಲಿ ಪರೇಡ್ ನಡೆಸಿ ಸುಸ್ತಾದ ಮೂವರು ವಿದ್ಯಾರ್ಥಿಗಳು ಪಥಸಂಚಲನ ಇನ್ನೇನು ಮುಕ್ತಾಯ ಹಂತಕ್ಕೆ ಬಂದಾಗ ಕುಸಿದು ಬಿದ್ದಿದ್ದಾರೆ.

ಉಪಹಾರ ಸೇವಿಸದೇ ಬೆಳಿಗ್ಗೆ ಬೇಗನೇ ಶಾಲೆಗೆ ಬಂದ ಕಾರಣಕ್ಕೆ ಪಥಸಚಲನದ ವೇಳೆ ವಿದ್ಯಾರ್ಥಿಗಳು ನಿತ್ರಾಣರಾಗಿ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ತಕ್ಷಣವೇ ಎಚ್ಚೆತ್ತ ಶಿಕ್ಷಕರು ವಿದ್ಯಾರ್ಥಿಗಳಿಗೆ ಗ್ಲುಕೋಸ್ ನೀಡಿ ಆರೈಕೆ ಮಾಡಿದ್ದಾರೆ. ಸಧ್ಯ ವಿದ್ಯಾರ್ಥಿಗಳ ಆರೋಗ್ಯ ಸುಧಾರಿಸಿದೆ ಎಂದು ತಿಳಿದುಬಂದಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read