ಯಾದಗಿರಿ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಯಾದಗಿರಿಯ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಣ್ಣಪ್ಪ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ.
ಭಾಗ್ಯವಂತಿ ದೇವರ ಹೆಸರಿನಲ್ಲಿ ಮಠ ನಡೆಸುತ್ತಿದ್ದ ಅಣ್ಣಪ್ಪ ಸ್ವಾಮೀಜಿ, ಇಬ್ಬರು ಸಹೋದರಿಯರನ್ನು ತಮ್ಮ ಬಳಿ ಇರಿಸಿಕೊಂಡಿದ್ದರು ಎನ್ನಲಾಗಿದೆ. ಈ ಪೈಕಿ 16 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತ ಬಾಲಕಿಯ ಕುಟುಂಬದವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಳಿಕ ಆರೋಪಿಯನ್ನು ಬಂಧಿಸಿ, ಪ್ರಕರಣದ ಕುರಿತು ತನಿಖೆ ಮುಂದುವರಿಸಿದ್ದಾರೆ.
ಪ್ರಕರಣದ ತನಿಖೆ ನಡೆಯುತ್ತಿದ್ದು, ಘಟನೆಗೆ ಸಂಬಂಧಿಸಿದ ಮತ್ತಷ್ಟು ಮಾಹಿತಿಯನ್ನು ಪೊಲೀಸರು ಕಲೆಹಾಕುತ್ತಿದ್ದಾರೆ.

