HomeKarnatakaBIG NEWS: ಯದುವೀರ್ ಒಡೆಯರ್ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

BIG NEWS: ಯದುವೀರ್ ಒಡೆಯರ್ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ನೀಡಿದೆ.

ರೆಡಿಯೋ ಮಿರ್ಚಿ 104.8ರಲ್ಲಿ ಪ್ರಸಾರವಾಗುತ್ತಿರುವ ಯದುವೀರ್ ಒಡೆಯರ್ ಅವರ ರಾಜರ ಬಾಯಿಂದ ರಾಜರ ಕಥೆಗಳು ಹೆಸರಿನ ಕಾರ್ಯಕ್ರಮ ವನ್ನು ನಿಲ್ಲಿಸುವಂತೆ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಕಾರ್ಯಕ್ರಮದಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗುತ್ತಿದೆ. ಯದುವೀರ್ ಕಾರ್ಯಕ್ರಮದ ಬಗ್ಗೆ ಪದೇ ಪದೇ ರೆಡಿಯೋದಲ್ಲಿ ಜಾಹೀರಾತು ಹಾಕಲಾಗುತ್ತಿದೆ. ಯದುವೀರ್ ಒಡೆಯರ್ ಓರ್ವ ಚುನಾವಣಾ ಅಭ್ಯರ್ಥಿಯಾಗಿರುವ ಹಿನ್ನೆಲೆಯಲ್ಲಿ ಈಗ ಕಾರ್ಯಕ್ರಮಗಳನ್ನು ನೀಡಿವುದು ನೀತಿ ಸಂಹಿತೆ ಉಲ್ಲಂಘನೆ. ಹಾಗಾಗಿ ಕಾರ್ಯಕ್ರಮ ನಿಲ್ಲಿಸಬೇಕು ಎಂದು ಒತ್ತಾಯಿಸಿ ಚುನಾವಣಾ ಆಯೋಗಕ್ಕೆ ಕೆಪಿಸಿಸಿ ವಕ್ತಾರ ಹೆಚ್.ಎ.ವೆಂಕಟೇಶ್ ದೂರು ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular