HomeLive NewsBIG NEWS: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅಭಿಮಾನೋತ್ಸವ: ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದ ಕೇಂದ್ರ...

BIG NEWS: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅಭಿಮಾನೋತ್ಸವ: ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಭಿಮಾನೋತ್ಸವ ಕಾರ್ಯಕ್ರಮ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಕೋಟೆ ನಾಡು ಚಿತ್ರದುರ್ಗಕ್ಕೆ ಆಗಮಿಸಿದ್ದಾರೆ.

ಮಾಜಿ ಸಿಎಂ ಯಡಿಯೂರಪ್ಪ ಅವರು 50 ವರ್ಷ ರಾಜಕೀಯ ಜೀವನ ಪೂರೈಸಿದ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಯಡಿಯೂರಪ್ಪ ಅಭಿಮಾನೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಚಿತ್ರದುರ್ಗದಲ್ಲಿ ಅದ್ದೂರಿ ಅಭಿಮಾನೋತ್ಸವ ಸಮಾರಂಭ ನಡೆಯುತ್ತಿದೆ. ನಾಲ್ಕು ಬಾರಿ ಕರ್ನಾಟಕದ ಮುಖ್ಯಮಂತ್ರಿ ಪಟ್ಟಕ್ಕೆ ಏರಿದ್ದ ಮಾಜಿ ಸಿಎ, ರಾಜಾಹುಲಿ ಬಿ.ಎಸ್.ಯಡಿಯೂರಪ್ಪ ಅವರನ್ನು ಸನ್ಮಾನಿಸಿ ಗೌರವಿಸಲು ಸ್ವತಃ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿತ್ರದುರ್ಗಕ್ಕೆ ಆಗಮಿಸಿದ್ದಾರೆ.

ನವದೆಹಲಿಯಿಂದ ಶಿವಮೊಗ್ಗಕ್ಕೆ ಆಗಮಿಸಿದ ಅಮಿತ್ ಶಾ, ಬಳಿಕ ವಿಶೇಷ ವಿಮಾನದಲ್ಲಿ ಚಿತ್ರದುರ್ಗಕ್ಕೆ ಆಗಮಿಸಿದರು. ಅಲ್ಲಿಂದ ನೇರವಾಗಿ ರಸ್ತೆ ಮಾರ್ಗದ ಮೂಲಕವಾಗಿ ಯಡಿಯೂರಪ್ಪ ಅಭಿಮಾನೋತ್ಸವ ಕಾರ್ಯಕ್ರಮ ವೇದಿಕೆಯಾದ ಮಾದಾರ ಚನ್ನಯ್ಯ ಮಠದ ಆವರಣದಲ್ಲಿ ನಿರ್ಮಿಸಲಾಗಿರುವ ಬೃಹತ್ ವೇದಿಕೆ ಆಗಮಿಸಿದರು. ವೇದಿಕೆಯಲ್ಲಿ ದೀಪ ಬೆಳಗುವ ಮೂಲಕ ಬಿ.ಎಸ್.ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ಚಾಲನೆ ನೀಡಲಾಯಿತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಪರೂಪದ ಕಾರ್ಯಕ್ರಮಕ್ಕೆ ರಾಜ್ಯದ ವಿವಿಧ ಮಠಗಳ ಮಠಾಧೀಶರು, ದೇಶದ ಮೂಲೆ ಮೂಲೆಗಳಿಂದ ಮಾತ್ರವಲ್ಲ ವಿದೇಶಗಳಲ್ಲಿರುವ ಯಡಿಯೂರಪ್ಪ ಅಭಿಮಾನಿಗಳು ಆಗಮಿಸಿದ್ದು ವಿಶೇಷವಾಗಿದೆ. ಈ ಸಮಾರಂಭದ ಮತ್ತೊಂದು ವಿಶೇಷ ಆಕರ್ಷಣೆಯೆಂದರೆ ಯಡಿಯೂರಪ್ಪನವರು ತಮ್ಮ ಆರಂಭಿಕ ರಾಜಕೀಯ ದಿನಗಳಲ್ಲಿ ಬಳಸುತ್ತಿದ್ದ ಅಂಬಾಸಿಡರ್ ಕಾರು ಪ್ರದರ್ಶನಕ್ಕೆ ಇಟ್ಟಿರುವುದು. ಲಕ್ಷಾಂತರ ಅಭಿಮಾನಿಗಳು ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular