HomeLatest Newsನಿರ್ಬಂಧಿತ ಅವಧಿಗೂ ಮುನ್ನವೇ ಅರ್ಧದಲ್ಲೇ ಯಕ್ಷಗಾನ ಪ್ರದರ್ಶನ ಸ್ಥಗಿತ: ಬಿಜೆಪಿ ಆಕ್ರೋಶ

ನಿರ್ಬಂಧಿತ ಅವಧಿಗೂ ಮುನ್ನವೇ ಅರ್ಧದಲ್ಲೇ ಯಕ್ಷಗಾನ ಪ್ರದರ್ಶನ ಸ್ಥಗಿತ: ಬಿಜೆಪಿ ಆಕ್ರೋಶ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪಾಣೆ ಮಂಗಳೂರಿನಲ್ಲಿ ನಿರ್ಬಂಧಿತ ಅವಧಿಗೂ ಮೊದಲೇ ಯಕ್ಷಗಾನ ಪ್ರದರ್ಶನವನ್ನು ಅರ್ಧದಲ್ಲೇ ನಿಲ್ಲಿಸುವ ಮೂಲಕ ಪೊಲೀಸರು ಹಿಂದೂ ಧಾರ್ಮಿಕ ಶ್ರದ್ಧೆ ಸಂಸ್ಕೃತಿಯ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಕ್ಷೇಪಿಸಿದ್ದಾರೆ.

ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿರುವ ವಿಜಯೇಂದ್ರ, ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆ ಸಂಪೂರ್ಣ ದಿಕ್ಕು ತಪ್ಪುತ್ತಿದೆ. ಹಿಂದೂ ಧಾರ್ಮಿಕ ಉತ್ಸವಗಳು, ಧಾರ್ಮಿಕ ಆಚರಣೆಗಳನ್ನು ಅಪಮಾನಿಸುತ್ತಿರುವ ಪ್ರಕರಣಗಳು ನಿರಂತರವಾಗಿ ವರದಿಯಾಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆ ಸಂಪೂರ್ಣ ದಿಕ್ಕು ತಪ್ಪುತ್ತಿದೆ, ಹಿಂದೂ ಉತ್ಸವಗಳು ಧಾರ್ಮಿಕ ಆಚರಣೆಗಳನ್ನು ಅಪಮಾನಿಸುತ್ತಿರುವ ಪ್ರಕರಣಗಳು ಮೇಲಿಂದ ಮೇಲೆ ವರದಿಯಾಗುತ್ತಿವೆ. ಗಣೇಶೋತ್ಸವದಲ್ಲಿ ಡಿಜೆ ನಿಷೇಧಿಸುವ ಸರ್ಕಾರ ಸಾಂಸ್ಕೃತಿಕ ಚಟುವಟಿಕೆಗಳನ್ನೂ ಹತ್ತಿಕ್ಕುತ್ತಿದೆ ಎಂದು ದೂರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಕ್ಷಿಣ ಕನ್ನಡ ಜಿಲ್ಲೆಯ ಪಾಣೆ ಮಂಗಳೂರಿನಲ್ಲಿ ನಿಗದಿತ ಸಮಯಕ್ಕೆ ಮುನ್ನವೇ ಪರಂಪರೆಯಿಂದ ನಡೆದುಬಂದ ಯಕ್ಷಗಾನ ಪ್ರದರ್ಶನವನ್ನು ನಿಲ್ಲಿಸುವ ಮೂಲಕ ಹಿಂದೂ ಧಾರ್ಮಿಕ ಶ್ರದ್ಧೆ ಹಾಗೂ ಸಂಸ್ಕೃತಿಯ ಮೇಲೆ ದೌರ್ಜನ್ಯ ನಡೆಸಿದೆ. ಮತ್ತೊಂದು ಕಡೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡದೇವತೆ ಚಾಮುಂಡೇಶ್ವರಿ ದೇವಸ್ಥಾನ ಹಿಂದೂಗಳಿಗೆ ಸೇರಿದ್ದಲ್ಲ ಎಂದು ಉಪಮುಖ್ಯಮಂತ್ರಿಗಳು ಹೇಳುತ್ತಾರೆ, ಅದೇ ಸಾಂಸ್ಕೃತಿಕ ನಗರಿಯ ಪೊಲೀಸ್ ಆಯುಕ್ತರ ಕಛೇರಿಯಲ್ಲಿ ಉದ್ಯಮಿ ದಂಪತಿಗಳ ರೀಲ್ಸ್ ಮಾಡಲು ಅವಕಾಶ ಮಾಡಿಕೊಟ್ಟು ಸಾಂಸ್ಕೃತಿಕ ನಗರಿಯ ಘನತೆಯನ್ನು ಕುಗ್ಗಿಸುತ್ತಿದೆ. ಹಿಂದೂ ಧಾರ್ಮಿಕ ಶ್ರದ್ಧೆ ಹಾಗೂ ನಾಡಿನ ಸಂಸ್ಕೃತಿಯನ್ನು ಅವಮಾನಿಸುವುದು ಕಾಂಗ್ರೆಸ್  ಸರ್ಕಾರದ ಒಂದು ಭಾಗವಾಗಿದೆ ಎಂದು ಟೀಕಿಸಿದ್ದಾರೆ.

ಗಣೇಶೋತ್ಸವದ ಸಾಂಪ್ರದಾಯಿಕ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಹೆಚ್ಚುವರಿ ಅವಧಿಯನ್ನು ವಿಸ್ತರಿಸಬೇಕು ಎಂದು ಕಳೆದ ವಿಧಾನಸಭಾ ಅಧಿವೇಶನದಲ್ಲಿಯೇ ಚರ್ಚೆಯಾಗಿ ಸರ್ಕಾರ ಸಮ್ಮತಿಯನ್ನೂ ವ್ಯಕ್ತಪಡಿಸಿದೆ. ಆದಾಗ್ಯೂ ಪೊಲೀಸರು ಗಣೇಶೋತ್ಸವದ ಮೇಲೆ ಕೆಂಗಣ್ಣು ಬೀರುತ್ತಿರುವುದು ಅತ್ಯಂತ ಖಂಡನೀಯ ಕ್ರಮವಾಗಿದೆ ಎಂದು ವಿಜಯೇಂದ್ರ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular