HomeEntertainmentಒಂದೇ ವಾರಕ್ಕೆ 'ಬಿಗ್ ಬಾಸ್' ಮನೆಯಿಂದ ನಟಿ 'ಯಮುನಾ ಶ್ರೀನಿಧಿ' ಔಟ್ |BIGGBOSS-11

ಒಂದೇ ವಾರಕ್ಕೆ ‘ಬಿಗ್ ಬಾಸ್’ ಮನೆಯಿಂದ ನಟಿ ‘ಯಮುನಾ ಶ್ರೀನಿಧಿ’ ಔಟ್ |BIGGBOSS-11

ಬೆಂಗಳೂರು : ಬಿಗ್ ಬಾಸ್ ಸೀಸನ್ -11 ಆರಂಭವಾಗಿ 1 ವಾರ ಕಳೆದಿದ್ದು, ಇದೀಗ ಒಂದೇ ವಾರಕ್ಕೆ ಬಿಗ್ ಬಾಸ್ ಮನೆಯಿಂದ ಯಮುನಾ ಶ್ರೀನಿಧಿ ಔಟ್ ಆಗಿದ್ದಾರೆ.

ಒಂದೇ ವಾರಕ್ಕೆ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಮನೆಯಿಂದ ಹೊರ ನಡೆದಿದ್ದಾರೆ.
ಬಿಗ್ ಬಾಸ್ ಮನೆಯಲ್ಲಿ ಹೆಚ್ಚು ಆ್ಯಕ್ಟೀವ್ ಇರದ ಕಾರಣ ಕಡಿಮೆ ವೋಟ್ ಬಂದಿದ್ದಕ್ಕೆ ಅವರು ಎಲಿಮಿನೇಟ್ ಆಗಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಧನರಾಜ್ ಕಾಮಿಡಿ ಮಾಡುತ್ತಾ ಎಲ್ಲರ ಗಮನ ಸೆಳೆಯುತ್ತಿದ್ದಾರೆ.

ಇನ್ನೂ. ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ 11ನೇ ಸೀಸನ್ ಕಾರ್ಯಕ್ರಮದ ವಿರುದ್ಧ ದೂರು ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಮಾನವ ಹಕ್ಕುಗಳನ್ನು ಉಲ್ಲಂಘಿಸಲಾಗಿದೆ ಎನ್ನುವ ಆರೋಪ ಮಾಡಲಾಗಿದ್ದು, 2 ದೂರು ದಾಖಲಾಗಿದೆ. ವಕೀಲೆ ರಕ್ಷಿತಾ ಸಿಂಗ್ ಅವರು ರಾಜ್ಯ ಮಹಿಳಾ ಆಯೋಗಕ್ಕೆ ದೂರು ದೂರು ನೀಡಿದ್ದರೆ, ಸಾಮಾಜಿಕ ಕಾರ್ಯಕರ್ತೆ ಎಂ.ನಾಗಮಣಿ ಎನ್ನುವವರು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದಾರೆ. ಬಿಗ್ ಬಾಸ್ ಶೋ ನಲ್ಲಿ ಮಹಿಳೆಯರ ಖಾಸಗಿತನಕ್ಕೆ ಧಕ್ಕೆಯಾಗಿದೆ. ಬಿಗ್ ಬಾಸ್ 11 ಸೀಸನ್ ನಲ್ಲಿ ಮಹಿಳಾ ಸ್ಪರ್ಧಿಗಳಿಗೆ ಕಿರುಕುಳ ನೀಡುತ್ತಿರುವುದರಿಂದ ಖಾಸಗಿತನಕ್ಕೆ ಧಕ್ಕೆಯಾಗುತ್ತಿದೆ ಎಂದು ದೂರು ನೀಡಲಾಗಿದೆ.

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular