HomeUncategorizedಪ್ರವಾಸಿಗರ ಗಮನಕ್ಕೆ: ಯಾಣ ಪ್ರವಾಸಿ ತಾಣಕ್ಕೆ ಪ್ರವೇಶ ನಿರ್ಬಂಧ

ಪ್ರವಾಸಿಗರ ಗಮನಕ್ಕೆ: ಯಾಣ ಪ್ರವಾಸಿ ತಾಣಕ್ಕೆ ಪ್ರವೇಶ ನಿರ್ಬಂಧ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಯಾಣಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಯಾಣ ಪ್ರವಾಸಿ ತಾಣಕ್ಕೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರಾವಳಿಯ ಯಲ್ಲಾಪುರ, ಕುಮಟಾ, ಹೊನ್ನಾವರ, ಭಟ್ಕಳ ಭಾಗದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಸಿದ್ಧ ಪ್ರವಾಸಿ ತಾಣ ಯಾಣದ ಸುತ್ತಮುತ್ತ ಸ್ಥಳಗಳಲಿ ಭೂಕುಸಿತದ ಆತಂಕ ಹಾಗೂ ಚಂಡಿಕಾ ನದಿಯ ಹಳ್ಳ ತುಂಬಿ ಹರಿಯುತ್ತಿರುವುದರಿಂದ ಪ್ರವಾಸಿಗರಿಗೆ ಯಾಣಕ್ಕೆ ತೆರಳದಂತೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ.

ಕಳೆದ ಎರಡು ವರ್ಷದ ಹಿಂದೆ ಯಾಣದ ಬಳಿ ಭೂ ಕುಸಿತವಾಗಿತ್ತು. ಇದಲ್ಲದೇ ಜಿಯಾಲಜಿಕಲ್ ಸರ್ವೆ ಆಫ್ ಇಂಡಿಯಾ ಸಹ ಮತ್ತೆ ಈ ಭಾಗದಲ್ಲಿ ಹೆಚ್ಚಿನ ಮಳೆಯಾದರೆ ಭೂಕುಸಿತವಾಗುವ ಎಚ್ಚರಿಕೆ ಸಹ ನೀಡಿತ್ತು. ನಿರಂತರ ಮಳೆ ಹಾಗೂ ಪ್ರಾಕೃತಿಕ ವಿಕೋಪದ ಹಿನ್ನೆಲೆ ಚಂಡಿಕಾ ನದಿ ತುಂಬಿ ಹರಿಯುತ್ತಿರುವ ಕಾರಣ, ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಯಾಣ ಪ್ರವಾಸಿ ತಾಣವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ ಎಂದು ಅರಣ್ಯ ಇಲಾಖೆ ಪ್ರಕಟಣೆ ಹೊರಡಿಸಿದೆ.

ಪರಿಸ್ಥಿತಿ ಸುಧಾರಿಸುವವರೆಗೆ ಸಾರ್ವಜನಿಕರು ಯಾಣಕ್ಕೆ ಭೇಟಿ ನೀಡದಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಅರಣ್ಯ ಇಲಾಖೆ ಹಾಗೂ ಶ್ರೀ ಮಹಾಗಣಪತಿ ಗ್ರಾಮ ಅರಣ್ಯ ಸಮಿತಿ ಯಾಣದ ವತಿಯಿಂದ ಹೊರಡಿಸಿರುವ ಸೂಚನೆಯಲ್ಲಿ, ನಿಷೇಧದ ಅವಧಿಯಲ್ಲಿ ಅಕ್ರಮವಾಗಿ ಪ್ರವೇಶಿಸುವವರ ವಿರುದ್ಧ ಅರಣ್ಯ ಕಾಯ್ದೆಯಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular