‘ಯಾರದ್ದೋ ದುಡ್ಡು ಎಲ್ಲಮ್ಮನ ಜಾತ್ರೆ’ : ಸಿಎಂ, ಜಮೀರ್ ಐಷಾರಾಮಿ ವಿಮಾನ ಪ್ರಯಾಣಕ್ಕೆ ವಿಜಯೇಂದ್ರ ಟೀಕೆ |Watch Video

ಬೆಂಗಳೂರು : ‘ಯಾರದ್ದೋ ದುಡ್ಡು ಎಲ್ಲಮ್ಮನ ಜಾತ್ರೆ’ , ‘ಜನರ ದುಡ್ಡು ಆಕಾಶದಲ್ಲಿ ಜಾತ್ರೆ’ ಹೀಗಂತ ಸಿಎಂ ಸಿದ್ದರಾಮಯ್ಯ ಹಾಗೂ ಜಮೀರ್ ವಿರುದ್ಧ BJP  ರಾಜ್ಯಾಧ್ಯ್ಷಕ್ಷ ಬಿ.ವೈ ವಿಜಯೇಂದ್ರ ವಾಗ‍್ಧಾಳಿ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ಐಷಾರಾಮಿ ಜೆಟ್ ನಲ್ಲಿ ಪ್ರಯಾಣಿಸಿದ್ದಕ್ಕೆ ವಿಜಯೇಂದ್ರ ಟೀಕಿಸಿದ್ದಾರೆ.

ಬಿ.ವೈ ವಿಜಯೇಂದ್ರ ಹೇಳಿದ್ದೇನು..?

“ಯಾರದ್ದೋ ದುಡ್ಡು ಎಲ್ಲಮ್ಮನ ಜಾತ್ರೆ ಜನರ ದುಡ್ಡು ಆಕಾಶದಲ್ಲಿ ಜಾತ್ರೆ”. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯ ಬರಗಾಲದಿಂದ ಬೇಯುತ್ತಿದೆ, ರೈತರು ಆತ್ಮ ಹತ್ಯೆಗೆ ಶರಣಾಗುತ್ತಿದ್ದಾರೆ, ಸಾಮಾನ್ಯರ ಬದುಕು ಅಸಹನೀಯ ಪರಿಸ್ಥಿತಿ ತಲುಪಿದೆ, ಇಂಥಾ ಗಭೀರ ಪರಿಸ್ಥಿತಿಯಲ್ಲೂ ಶ್ರೀಮಂತಿಕೆಯ ದರ್ಪ ತೋರುವ, ಮೋಜು, ಮಸ್ತಿಯೇ ತನ್ನ ಜೀವನ ಶೈಲಿ ಎಂದು ಪ್ರದರ್ಶಿಸಿಕೊಳ್ಳುತ್ತಿರುವ ಸಚಿವ ಜಮೀರ್ ಜೊತೆ ಅವರ ಜೊತೆ ಜನರ ತೆರಿಗೆ ಹಣ ವ್ಯಯಿಸಿ ಐಶಾರಾಮಿ ಜೆಟ್ ವಿಮಾನದಲ್ಲಿ ಪ್ರಯಾಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಮೋಜಿನ ಭಾಗವಾಗಿರುವುದು ಈ ರಾಜ್ಯದ ದೌರ್ಭಾಗ್ಯವಲ್ಲದೇ ಮತ್ತಿನ್ನೇನು ಅಲ್ಲ.

ಮುಖ್ಯಮಂತ್ರಿ ಮತ್ತವರ ಮಂತ್ರಿಮಂಡಲದ ಸದಸ್ಯರ ಆಡಂಬರ, ವೈಭವದ ಪ್ರದರ್ಶನ ಗಳನ್ನು ನೋಡಿದರೆ “ರೋಮ್ ದೊರೆ ನೀರೋ” ಉಲ್ಲೇಖಿಸುವ ಬದಲು “ರಾಜ್ಯ ಬರದಿಂದ ತತ್ತರಿಸುತ್ತಿದ್ದರೆ ದೊರೆ ಆಕಾಶದಲ್ಲಿ ಓಲಾಡುತ್ತ ತೇಲುತ್ತಿದ್ದಾರೆ….” ಎಂದು ವರ್ಣಿಸಬಹುದಾಗಿದೆ ಎಂದು ಬಿ.ವೈ ವಿಜಯೇಂದ್ರ ವಾಗ್ಧಾಳಿ ನಡೆಸಿದ್ದಾರೆ.

https://twitter.com/BYVijayendra/status/1738080269398372737?ref_src=twsrc%5Etfw

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read