HomeAgricultureಯಶಸ್ವಿನಿ ಯೋಜನೆ ನವೀಕರಣ, ಹೊಸ ಸದಸ್ಯರ ನೋಂದಾಯಿಸಲು ಮಾ. 31 ಕೊನೆ ದಿನ

ಯಶಸ್ವಿನಿ ಯೋಜನೆ ನವೀಕರಣ, ಹೊಸ ಸದಸ್ಯರ ನೋಂದಾಯಿಸಲು ಮಾ. 31 ಕೊನೆ ದಿನ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಯಶಸ್ವಿನಿ ಯೋಜನೆಯನ್ನು 2025-26 ನೇ ಸಾಲಿಗೂ ಮುಂದುವರೆಸಲು ಅರ್ಹ ಸದಸ್ಯರ ನೋಂದಣಿಯು ಈಗಾಗಲೇ ಪ್ರಾರಂಭಿಸಲಾಗಿದ್ದು, ಈ ಯೋಜನೆಯಡಿ ಸದಸ್ಯತ್ವ ನವೀಕರಣ ಮತ್ತು ಹೊಸ ಸದಸ್ಯರ ನೊಂದಣಿಗೆ ಮಾರ್ಚ್ 31 ರ ವರಗೆ ಅವಕಾಶವಿದೆ.

ಜಿಲ್ಲೆಯಲ್ಲಿರುವ ಯಾವುದೇ ಸಹಕಾರ ಸಂಘಗಳು/ ಸಹಕಾರ ಬ್ಯಾಂಕುಗಳು ಮತ್ತು ಸೌಹಾರ್ದ ಸಹಕಾರಿ ಸಂಘಗಳಲ್ಲಿ ಸದಸ್ಯರಾಗಿರುವವರು ಈ ಯೋಜನೆಯ ಉಪಯೋಗ ಪಡೆದುಕೊಳ್ಳಬಹುದು ಅದರಂತೆ ಈ ಯಶಸ್ವಿನಿ ಯೋಜನೆಯ ವಿಮೆ ಮಾಡಿಸಿಕೊಂಡು ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿ ತಿಳಿಸಿದೆ.(ಷರತ್ತುಗಳು ಅನ್ವಯ)

ನೋಂದಣಿಗೆ ಲಗತ್ತಿಸಬೇಕಾದ ದಾಖಲೆಗಳು:

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 ಅರ್ಜಿ ನಮೂನೆ, ರೇಷನ್ ಕಾರ್ಡ್/ ಆಧಾರ್ ಕಾರ್ಡ್, ಯೋಜನೆಗೆ ಒಳಪಡುವ ಸದಸ್ಯರ ಪ್ರತಿಯೊಬ್ಬರ ತಲಾ 2 ಫೋಟೋ. ಗ್ರಾಮೀಣ ಸಹಕಾರ ಸಂಘಗಳ ಹೊಸ ಸದಸ್ಯರ ನೋಂದಣಿ ಹಾಗೂ ನವೀಕರಣಕ್ಕೆ ಸಂಬಂಧಿಸಿದಂತೆ ಗರಿಷ್ಟ 04 ಸದಸ್ಯರ ಕುಟುಂಬ ಒಂದಕ್ಕೆ ರೂ. 500 ವಂತಿಕೆ ಹಾಗೂ 4 ಕ್ಕಿಂತ ಹೆಚ್ಚಿನ ಸದಸ್ಯರುಗಳ ಕುಟುಂಬದ ಪ್ರತೀಯೊಬ್ಬ ಹೆಚ್ಚುವರಿ ಸದಸ್ಯರಿಗೆ ರೂ. 100 ಪಾವತಿಸಬೇಕು.

ನಗರ ಸಹಕಾರ ಸಂಘಗಳ ಹೊಸ ಸದಸ್ಯರ ನೋಂದಣಿ ಹಾಗೂ ನವೀಕರಣಕ್ಕೆ ಸಂಬಂಧಿಸಿದಂತೆ ಗರಿಷ್ಟ 4 ಸದಸ್ಯರ ಕುಟುಂಬ ಒಂದಕ್ಕೆ ರೂ. 1000 ವಂತಿಕೆ ಹಾಗೂ 4 ಕ್ಕಿಂತ ಹೆಚ್ಚಿನ ಸದಸ್ಯರುಗಳ ಕುಟುಂಬದ ಪ್ರತೀಯೊಬ್ಬ  ಹೆಚ್ಚುವರಿ ಸದಸ್ಯರಿಗೆ ರೂ 200 ಗಳನ್ನು ಪಾವತಿಸಬೇಕು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸದಸ್ಯರಿಗೆ ಉಚಿತ (ಆರ್.ಡಿ ಸಂಖ್ಯೆಯ ಜಾತಿ ಪ್ರಮಾಣ ಪತ್ರ ನೀಡಿದಲ್ಲಿ ಮಾತ್ರ ಅನ್ವಯವಾಗುತ್ತದೆ). ಅರ್ಜಿ ಸಲ್ಲಿಸಲು ಮಾರ್ಚ್ 31 ಕೊನೆ ದಿನವಾಗಿದೆ. ಕುಟುಂಬದ ಒಬ್ಬ ವ್ಯಕ್ತಿ ಸಂಬಂದಪಟ್ಟ ಸಹಕಾರ ಸಂಘದಲ್ಲಿ ಸದಸ್ಯರಾಗಿದ್ದು 01 ತಿಂಗಳು ಗತಿಸಿದಲ್ಲಿ ಈ ಯೋಜನೆಗೆ ಅರ್ಹರಾಗಿರುತ್ತಾರೆ. ಹಾಗೂ ನೋಂದಾಯಿತ ಸದಸ್ಯರ ಕುಟುಂಬಕ್ಕೆ ವಾರ್ಷಿಕ ಗರಿಷ್ಠ ರೂ .5 ಲಕ್ಷದ ವರೆಗೆ ನೆಟ್‍ವರ್ಕ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಅವಕಾಶವಿದೆ. ಹೆಚ್ಚಿನ ಮಾಹಿತಿಗೆ ಚೇತನ್ ಬಿ.ಎಸ್. ಯಶಸ್ವಿನಿ ಜಿಲ್ಲಾ ಸಂಯೋಜಕರು ಕೊಡಗು ಜಿಲ್ಲೆ, ಮೊಬೈಲ್ ಸಂಖ್ಯೆ 9591469497 ಮತ್ತು 8970824987 ಇವರನ್ನು ಸಂಪರ್ಕಿಸಬಹುದು ಎಂದು ಸಹಕಾರ ಸಂಘಗಳ ಉಪ ನಿಬಂಧಕರಾದ ರವಿಕುಮಾರ್ ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular