HomeKarnataka‘ಯಶಸ್ವಿನಿ’ ಆರೋಗ್ಯ ಯೋಜನೆ ಲಾಭ ಪಡೆಯಲು ಇಲ್ಲಿದೆ ಮಾಹಿತಿ

‘ಯಶಸ್ವಿನಿ’ ಆರೋಗ್ಯ ಯೋಜನೆ ಲಾಭ ಪಡೆಯಲು ಇಲ್ಲಿದೆ ಮಾಹಿತಿ

ಬಳ್ಳಾರಿ: ಪ್ರಸ್ತಕ ಸಾಲಿನಲ್ಲಿ ರಾಜ್ಯ ಸರ್ಕಾರ ಮರು ಜಾರಿಗೊಳಿಸಿರುವ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯ ಲಾಭ ಪಡೆಯಲು ಸಹಕಾರ ಸಂಘಗಳು ಹೊಸ ಸದಸ್ಯರನ್ನು ನೋಂದಾಯಿಸಲು ಸಹಕಾರ ಸಂಘಗಳ ಉಪ ನಿಬಂಧಕರು ತಿಳಿಸಿದ್ದಾರೆ.

ಸಹಕಾರಿಗಳಿಗಾಗಿ ಯಶಸ್ವಿನಿ ರಕ್ಷಣಾ ಯೋಜನೆಯನ್ನು ಮರು ಜಾರಿಗೊಳಿಸಲಾಗಿದ್ದು, ಜಿಲ್ಲೆಯ ಸಹಕಾರಿಗಳು ಯಶಸ್ವಿನಿ ಯೋಜನೆಯ ಸದುಪಯೋಗಪಡಿಸಿಕೊಳ್ಳಲು ಜಿಲ್ಲೆಯ ಸಹಕಾರ ಸಂಘಗಳ ಹೊಸ ಸದಸ್ಯರು ಡಿ.31 ರೊಳಗಾಗಿ ನೋಂದಾಯಿಸಿಕೊಳ್ಳಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗಾಗಿ ನಗರದ ರೈಲ್ವೇ ಸ್ಟೇಷನ್ ರಸ್ತೆಯ ಜನತಾ ಬಜಾರ್ ಕಟ್ಟಡದ ಸಹಕಾರ ಸಂಘಗಳ ಉಪ ನಿಬಂಧಕರ ಕಾರ್ಯಾಲಯ ಅಥವಾ ಕಚೇರಿಯ ದೂ.08392-272635 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular