HomeBusinessರೈತರಿಗೆ ಗುಡ್ ನ್ಯೂಸ್: ಮಹತ್ವಾಕಾಂಕ್ಷಿ ಯಶಸ್ವಿನಿ ಯೋಜನೆ ನೋಂದಣಿ ಅವಧಿ ಮಾ. 31 ರವರೆಗೆ ವಿಸ್ತರಣೆ

ರೈತರಿಗೆ ಗುಡ್ ನ್ಯೂಸ್: ಮಹತ್ವಾಕಾಂಕ್ಷಿ ಯಶಸ್ವಿನಿ ಯೋಜನೆ ನೋಂದಣಿ ಅವಧಿ ಮಾ. 31 ರವರೆಗೆ ವಿಸ್ತರಣೆ

ಬೆಂಗಳೂರು: ಮಹತ್ವಾಕಾಂಕ್ಷಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ ನೋಂದಣಿ ಅವಧಿಯನ್ನು ಮಾರ್ಚ್ 31 ರವರೆಗೆ ವಿಸ್ತರಿಸಲಾಗಿದೆ.

ರಾಜ್ಯ ಸರ್ಕಾರದ ಮಹತ್ವಕಾಂಕ್ಷಿಯ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ ಜಾರಿ ಮತ್ತು ಹೊಸ ಸದಸ್ಯರ ನೋಂದಣಿ ಅವಧಿ ಮಾರ್ಚ್ 31 ರವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ಹೆಚ್ಚಿನ ಜನ ಯೋಜನೆಗೆ ನೋಂದಾಯಿಸಿಕೊಳ್ಳತೊಡಗಿದ್ದಾರೆ. ಹೀಗಾಗಿ ಅವಧಿ ವಿಸ್ತರಿಸಬೇಕೆಂದು ಪ್ರಸ್ತಾವನೆ ಸಲ್ಲಿಸಲಾಗಿದ್ದು, ಇದನ್ನು ಪರಿಗಣಿಸಿ ನೋಂದಣಿ ಅವಧಿಯನ್ನು ವಿಸ್ತರಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಹಕಾರ ಸಂಘಗಳ ಸದಸ್ಯರ ಅನುಕೂಲಕ್ಕೆ ಯೋಜನೆ ಜಾರಿಗೊಳಿಸಿದ್ದು, ಡಿಸೆಂಬರ್ 31 ವರೆಗೆ ಇದ್ದ ಅವಧಿಯನ್ನು ಈ ಹಿಂದೆ ಎರಡು ಬಾರಿ ವಿಸ್ತರಿಸಲಾಗಿತ್ತು. ಫೆಬ್ರವರಿ 28 ನೋಂದಣಿಗೆ ಕೊನೆಯ ದಿನವಾಗಿದ್ದು, ಇದುವರೆಗೆ 34.52 ಲಕ್ಷ ಸದಸ್ಯರು ನೋಂದಾಯಿಸಿಕೊಂಡಿದ್ದಾರೆ. ನೋಂದಣಿಯಲ್ಲಿ ಗುರಿ ಮೀರಿ ಸಾಧನೆ ಮಾಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular