HomeKarnatakaರಾಜ್ಯದ ಸಹಕಾರ ಸಂಘಗಳ ಸದಸ್ಯರಿಗೆ ಗುಡ್ ನ್ಯೂಸ್: ‘ಯಶಸ್ವಿನಿ’ ಯೋಜನೆಯಡಿ 1250ಕ್ಕೂ ಹೆಚ್ಚು ಚಿಕಿತ್ಸೆ ಉಚಿತ

ರಾಜ್ಯದ ಸಹಕಾರ ಸಂಘಗಳ ಸದಸ್ಯರಿಗೆ ಗುಡ್ ನ್ಯೂಸ್: ‘ಯಶಸ್ವಿನಿ’ ಯೋಜನೆಯಡಿ 1250ಕ್ಕೂ ಹೆಚ್ಚು ಚಿಕಿತ್ಸೆ ಉಚಿತ

ಮಡಿಕೇರಿ: ನಗರದ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಬೋಧಕ ಆಸ್ಪತ್ರೆಯಲ್ಲಿ ಸೆಪ್ಟೆಂಬರ್ 1 ರಿಂದ ಯಶಸ್ವಿನಿ ಯೋಜನೆಯನ್ನು ಜಾರಿಗೊಳಿಸಲಾಗಿದೆದೆ.

ಈ ಯೋಜನೆಯಡಿ ಕೊಡಗು ವೈದ್ಯಕೀಯ ವಿಜ್ಞಾನಗಳ ಆಸ್ಪತ್ರೆಯಲ್ಲಿ ಒಳರೋಗಿಗಳಾಗಿ ಚಿಕಿತ್ಸೆಗೆ ದಾಖಲಾಗುವ ರಾಜ್ಯದ ಸಹಕಾರ ಸಂಘಗಳ ಸದಸ್ಯರು ತಮ್ಮ ಯಶಸ್ವಿನಿ ಯೋಜನೆಯ ಗುರುತಿನ ಚೀಟಿ, ಆಧಾರ್ ಕಾರ್ಡ್ ಪ್ರತಿ ತೋರಿಸಿ ಚಿಕಿತ್ಸೆಗಳನ್ನು ಸಂಪೂರ್ಣ ಉಚಿತವಾಗಿ ಪಡೆಯಬಹುದು.

ಆಸ್ಪತ್ರೆಯಲ್ಲಿ ಯೋಜನೆಯಡಿ ಲಭ್ಯವಿರುವ ಚಿಕಿತ್ಸೆಗಳ ವಿವರ:

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಂಡಿಚಿಪ್ಪಿನ ಶಸ್ತ್ರಚಿಕಿತ್ಸೆ, ಕೀ ಹೋಲ್ ಶಸ್ತ್ರ ಚಿಕಿತ್ಸೆಗಳು, ಎಲ್ಲಾ ರೀತಿಯ ಹರ್ನಿಯಾ ಶಸ್ತ್ರಚಿಕಿತ್ಸೆಗಳು, ಮೂಳೆ ಮುರಿತಕ್ಕೆ ಮಾಡುವ ಎಲ್ಲಾ ರೀತಿಯ ಶಸ್ತ್ರಚಿಕಿತ್ಸೆಗಳು, ಗರ್ಭಿಣಿಯರ ಆರೈಕೆ ಹಾಗೂ ಸಿಸೇರಿಯನ್ ಶಸ್ತ್ರ ಚಿಕಿತ್ಸೆಗಳು ಮತ್ತು ಇನ್ನೂ 1250 ಕ್ಕೂ ಹೆಚ್ಚಿನ ಚಿಕಿತ್ಸೆಗಳು ಆಸ್ಪತ್ರೆಯಲ್ಲಿ ಲಭ್ಯವಿದೆ.

ಹೆಚ್ಚಿನ ಮಾಹಿತಿಗೆ ಆಸ್ಪತ್ರೆಯ ಯಶಸ್ವಿನಿ ಯೋಜನೆಯ ಕೌಂಟರ್‍ನ ಸಿಬ್ಬಂದಿಗಳನ್ನು ಹಾಗೂ ಆಸ್ಪತ್ರೆಯ ಎಲ್ಲಾ ಆರೋಗ್ಯ ವಿಮಾ ಯೋಜನೆಗಳ ನೋಡಲ್ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಹಾಗೂ ನಿರ್ದೇಶಕರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular