HomeKarnatakaರಾಜ್ಯದ ಜನತೆಗೆ ಗುಡ್ ನ್ಯೂಸ್: ‘ಆಯುಷ್ಮಾನ್ ಭಾರತ್’ ಯೋಜನೆಗೆ ಸಮನಾಗಿ ‘ಯಶಸ್ವಿನಿ’ ಚಿಕಿತ್ಸಾ ದರ ಪರಿಷ್ಕರಣೆ

ರಾಜ್ಯದ ಜನತೆಗೆ ಗುಡ್ ನ್ಯೂಸ್: ‘ಆಯುಷ್ಮಾನ್ ಭಾರತ್’ ಯೋಜನೆಗೆ ಸಮನಾಗಿ ‘ಯಶಸ್ವಿನಿ’ ಚಿಕಿತ್ಸಾ ದರ ಪರಿಷ್ಕರಣೆ

ಬೆಂಗಳೂರು: ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ಯೋಜನೆಯ ಚಿಕಿತ್ಸಾ ದರಕ್ಕೆ ಸಮನಾಗಿ ಯಶಸ್ವಿನಿ ಯೋಜನೆಯ ಚಿಕಿತ್ಸಾ ದರ ಪರಿಷ್ಕರಿಸಲು ನಿರ್ಧರಿಸಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 15 -20 ವರ್ಷಗಳ ಹಿಂದೆ ನಿಗದಿಪಡಿಸಿದ್ದ ಚಿಕಿತ್ಸಾ ದರವೇ ಈಗಲೂ ಇದ್ದು, ಅದನ್ನು ಪರಿಷ್ಕರಿಸುವಂತೆ ಖಾಸಗಿ ಆಸ್ಪತ್ರೆಗಳು ಒತ್ತಾಯಿಸುತ್ತಿದ್ದ ಹಿನ್ನಲೆಯಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಚಿಕಿತ್ಸಾ ದರಕ್ಕೆ ಸಮನಾಗಿ ಯಶಸ್ವಿನಿ ಯೋಜನೆ ಚಿಕಿತ್ಸಾ ದರಗಳನ್ನು ಪರಿಷ್ಕರಿಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯಶಸ್ವಿನಿ ಯೋಜನೆಯಡಿ ರೋಗಿಗಳಿಗೆ ಚಿಕಿತ್ಸೆ ನೀಡಿದ ಒಂದು ವಾರದೊಳಗೆ ಆಸ್ಪತ್ರೆಗಳಿಗೆ ಬಿಲ್ ಪಾವತಿ ವ್ಯವಸ್ಥೆ ಜಾರಿಗೊಳಿಸಲಾಗಿದ್ದು, ಯೋಜನೆಯಡಿ ನೋಂದಾಯಿತರು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳಲು ಯಾವುದೇ ಸಮಸ್ಯೆಯಾಗದು ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular