HomeKarnatakaಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ

ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ

ಬೆಂಗಳೂರು: ಬರ ಪೀಡಿತ ತಾಲೂಕುಗಳ ಪಟ್ಟಿ ವಿಚಾರವಾಗಿ ಸೂಕ್ತವಾಗಿ ಘೋಷಣೆ ಮಾಡದ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕರೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಇಂಡಿ ಕ್ಷೇತ್ರವನ್ನು ಬರದ ಪಟ್ಟಿಯಲ್ಲಿ ಘೋಷಿಸಿಲ್ಲ ಎಂದು ಬೇಸರಗೊಂಡು ಶಾಸಕ ಯಶವಂತರಾಯಗೌಡ ಪಾಟೀಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಬರಗಾಲ ಪೀಡಿತ ಪಟ್ಟಿಯಿಂದ ವಿಜಯಪುರ ಜಿಲ್ಲೆಯ ಇಂಡಿ, ಚಡಚಣ ತಾಲೂಕು ಕೈಬಿಟ್ಟ ಹಿನ್ನೆಲೆಯಲ್ಲಿ ತೀವ್ರ ಅಸಮಾಧಾನಗೊಂಡು ಶಾಸಕ ಯಶವಂತರಾಯಗೌಡ ಪಾಟೀಲ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಲವು ಬಾರಿ ಮನವಿ ಮಾಡಿದರೂ ಇಂಡಿ ಹಾಗೂ ಚಡಚಣ ತಾಲೂಕು ಬರ ಘೋಷಣೆ ಮಾಡಿಲ್ಲ. ನಮ್ಮ ಮಾತಿಗೆ, ನಮ್ಮ ಭಾವನೆಗಳಿಗೆ ಬೆಲೆ ಇಲ್ಲದಂತಾಗಿದೆ ಎಂದು ಬೇಸರಗೊಂಡು ಸ್ಪೀಕರ್ ಅವರನ್ನ ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಈಗಿನ ರಾಜಕೀಯ ವಾತಾವಣರದಲ್ಲಿ ಬಲಾಢ್ಯರಿಗೆ, ಒತ್ತಡ ತಂತ್ರಗಳನ್ನು ಹೆಣೆಯುವವರಿಗೆ ಮನ್ನಣೆ ಇದೆ. ನಮ್ಮಂತಹ ಸೌಮ್ಯ ಸ್ವಭಾವದವರಿಗೆ ಯಾವುದೇ ಕೆಲಸಗಳಿಗೆ ಮನ್ನಣೆ ದೊರೆಯುತ್ತಿಲ್ಲ. ಕಾರಣ ನನ್ನ ಕ್ಷೇತ್ರದ ಜನರ ಅಶೆ, ಆಶೋತ್ತರಗಳಿಗೆ ಸ್ಪಂದಿಸಲು ಸಾಧ್ಯವಾಗದ ಕಾರಣ ರಾಜೀನಾಮೆ ನೀಡುತ್ತಿದ್ದೇನೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಬೆಳಗ್ಗೆಯೇ ಸ್ಪೀಕರ್​ಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಈ ಸಂಬಂಧ ಸಿಎಂ ಡಿಕೆ ಶಿವಕುಮಾರ್​​ ಅವರಿಗೂ ಯಶವಂತರಾಯಗೌಡ ಪಾಟೀಲ್ ಮಾಹಿತಿ ನೀಡಿದ್ದು, ಸದ್ಯ ಸಿಎಂ ಕಚೇರಿಯಲ್ಲಿ ಶಾಸಕರ ಮನವೊಲಿಕೆ ಯತ್ನ ನಡೆಯುತ್ತಿದೆ.

ಈ ಹಿಂದೆಯೂ ರಾಜೀನಾಮೆ ನೀಡಿದ್ದ ಶಾಸಕ

ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಹಿರಿತನ ಪರಿಗಣಿಸಿ ತಮಗೆ ಸಚಿವ ಸ್ಥಾನ ನೀಡಿಲ್ಲ ಎಂದು ಬೇಸರಗೊಂಡು ಈ ಹಿಂದೆಯೂ ಯಶವಂತರಾಯಗೌಡ ಪಾಟಿಲ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಸಂಪುಟ ವಿಸ್ತರಣೆ ಬಳಿಕ ನಂತರ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ನಡುವೆ, ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದರು.

ಇಂದಿನ ದಿನಗಳಲ್ಲಿ ನಿಷ್ಠಾವಂತರಿಗೆ ಮತ್ತು ಪ್ರಾಮಾಣಿಕರಿಗೆ ಬೆಲೆ ಇಲ್ಲದಂತಾಗಿದೆ. ಈ ಬಾರಿ ಸಚಿವ ಸ್ಥಾನ ಸಿಗುವ ಪೂರ್ಣ ನಿರೀಕ್ಷೆ ಇತ್ತು ಹಾಗೂ ಪಕ್ಷದ ವರಿಷ್ಠರು ಕೂಡ ಭರವಸೆ ನೀಡಿದ್ದರು. ಆದರೆ ಕೊನೆ ಕ್ಷಣದಲ್ಲಿ ಕೈಬಿಟ್ಟು ಕೊಟ್ಟ ಮಾತನ್ನು ಉಳಿಸಿಕೊಳ್ಳಲಿಲ್ಲ. ಇದರಿಂದ ಮನಸ್ಸಿಗೆ ಭಾರಿ ಬೇಸರವಾಗಿದೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ತಿಳಿಸಿದ್ದರು. ಆದರೆ ಆ ಬಳಿಕ ನಡೆದ ಬೆಳವಣಿಗೆಯಲ್ಲಿ ಶಾಸಕರನ್ನು ಮನವೊಲಿಸುವಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಪಕ್ಷದ ವರಿಷ್ಠರು ಯಶಸ್ವಿಯಾದ ಹಿನ್ನೆಲೆ ಯಶವಂತರಾಯಗೌಡ ಪಾಟೀಲ್ ತಮ್ಮ ರಾಜೀನಾಮೆ ಹಿಂಪಡೆದಿದ್ದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular