HomeKarnatakaಮನೆಯಲ್ಲಿ ಅಮ್ಮ ಇರಲಿಲ್ಲ; ಹಾಗಾಗಿ ಕಾರ್ಯಕ್ರಮಕ್ಕೆ ಬರೋದು ತಡವಾಯ್ತು ಎಂದ ಸಚಿವ ಯತೀಂದ್ರ ಸಿದ್ದರಾಮಯ್ಯ

ಮನೆಯಲ್ಲಿ ಅಮ್ಮ ಇರಲಿಲ್ಲ; ಹಾಗಾಗಿ ಕಾರ್ಯಕ್ರಮಕ್ಕೆ ಬರೋದು ತಡವಾಯ್ತು ಎಂದ ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ದಸರಾ ಹಿನ್ನೆಲೆಯಲ್ಲಿ ಗಜಪಡೆ ಮಾವುತರು ಮತ್ತು ಕಾವಾಡಿಗರಿಗಾಗಿ ಇಂದು ಉಪಹಾರ ಕೂಟ ಆಯೋಜಿಸಲಾಗಿತ್ತು. ಉಪಹಾರ ಕೂಟಕ್ಕೆ ತಡವಾಗಿ ಆಗಮಿಸಿದ್ದ ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಶಾಸಕ ತನ್ವೀರ್ ಸೇಠ್ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇಂದು ಬೆಳಗ್ಗೆ 9 ಗಂಟೆಗೆ ನಿಗದಿಯಾಗಿದ್ದ ಉಪಹಾರ ಕಾರ್ಯಕ್ರಮಕ್ಕೆ ಯತೀಂದ್ರ ಸಿದ್ದರಾಮಯ್ಯ ಒಂದು ಗಂಟೆ ತಡವಾಗಿ ಆಗಮಿಸಿದ್ದಾರೆ. ಅಂದರೆ 10 ಗಂಟೆಗೆ ಸಚಿವರು ಆಗಮಿಸಿದರು. ಇದರಿಂದ ಮಾವುತರು ಮತ್ತು ಕಾವಾಡಿಗರು ಒಂದು ಗಂಟೆ ಕಾಲ ಕಾಯುವಂತಾಯಿತು. ಸಚಿವರ ಈ ನಡೆಗೆ ಶಾಸಕ ತನ್ವೀರ್ ಸೇಠ್ ಗರಂ ಆದರು.

ಸಮಯಕ್ಕೆ ಸರಿಯಾಗಿ ಸ್ಥಳಕ್ಕೆ ಆಗಮಿಸಿದ್ದ ಶಾಸಕ ತನ್ವೀರ್ ಸೇಠ್, ಯತೀಂದ್ರ ಸಿದ್ದರಾಮಯ್ಯ ಅವರ ವಿಳಂಬದಿಂದ ಬೇಸರಗೊಂಡರು. 9:45ರವರೆಗೂ ಕಾದಿದ್ದ ತನ್ವೀರ್ ಸೇಠ್, ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ತಮ್ಮ ಆಕ್ರೋಶ ಹೊರಹಾಕಿದರು. ‘‘ಸಮಯ ಪ್ರಜ್ಞೆ ಇಲ್ವೇನ್ರೀ? ದೇರ್ ಇಸ್ ಎ ಲಿಮಿಟ್ ಫಾರ್ ಎವರಿಥಿಂಗ್’’ ಎಂದು ಅವರು ಜಿಲ್ಲಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾವುತರು ಕಾಡಿನ ಜನರು, ಅವರಿಗೆ ಸಮಯಕ್ಕೆ ಸರಿಯಾಗಿ ಊಟ ತಿಂಡಿ ಆಗಬೇಕು ಎಂದು ಸೇಠ್ ಪ್ರತಿಪಾದಿಸಿದರು. ನಂತರ ತನ್ವೀರ್ ಸೇಠ್ ಉಪಹಾರ ಕೂಟ ಸ್ಥಳದಿಂದ ತೆರಳಿದರು. ನಂತರ 10 ಗಂಟೆಗೆ ಯತೀಂದ್ರ ಸಿದ್ದರಾಮಯ್ಯ ಸ್ಥಳಕ್ಕೆ ಆಗಮಿಸಿದರು. ಮಾಜಿ ಸಚಿವ ಜಿ.ಟಿ. ದೇವೇಗೌಡರೊಂದಿಗೆ ಉಪಹಾರ ಕೂಟದಲ್ಲಿ ಪಾಲ್ಗೊಂಡರು.

ತಡವಾಗಿ ಬಂದ ಸಚಿವ ಯತೀಂದ್ರ ಸಿದ್ದರಾಮಯ್ಯ ಸಮಜಾಯಿಷಿ ನೀಡಿದ್ದಾರೆ. ನಮ್ಮದು ಹೊಸ ಮನೆ, ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ. ಮನೆಯಲ್ಲಿ ಅಮ್ಮ ಇರಲಿಲ್ಲ, ಕೆಲಸಗಾರರೂ ಇರಲಿಲ್ಲ. ಹೀಗಾಗಿ ಕೆಲವೊಂದಿಷ್ಟು ವ್ಯವಸ್ಥೆ ಮಾಡಿ ಬರುವುದರಲ್ಲಿ ತಡವಾಯಿತು ಎಂದಿದ್ದಾರೆ.

ಉದ್ದೇಶಪೂರ್ವಕವಾಗಿ ನಾನು ತಡವಾಗಿ ಬಂದಿಲ್ಲ. ಮನೆಯಲ್ಲಿ ಸ್ವಲ್ಪ ವ್ಯವಸ್ಥೆ ಮಾಡಿ ಬರಬೇಕಾಗಿದ್ದರಿಂದ ತಡವಾಯಿತು ಎಂದು ತಿಳಿಸಿದ್ದಾರೆ. ಬೆಳಿಗ್ಗೆ 9 ಗಂಟೆಗೆ ನಿಗದಿಯಾಗಿದ್ದ ಕಾರ್ಯಕ್ರಮಕ್ಕೆ ಸಚಿವರು 9.30 ಆದರೂ ಬಾರದ ಬಗ್ಗೆ ಶಾಸಕ ತನ್ವೀರ್ ಸೇಠ್ ಅಸಮಾಧಾನಗೊಂಡು ಸ್ಥಳದಿಂದ ವಾಪಸ್ ಆಗಿದ್ದರು.

ಸಚಿವ ಯತೀಂದ್ರ ಸಿದ್ದರಾಮಯ್ಯ ಅವರ ವಿಳಂಬ ಧೋರಣೆ ಬಗ್ಗೆ ಶಾಸಕರು ಬಹಿರಂಗವಾಗಿ ಅಸಮಾಧಾನ ಹೊರಹಾಕಿ ಗದರಿದ್ದು, ಮೈಸೂರು ಕಾಂಗ್ರೆಸ್ ನಲ್ಲಿ ಚರ್ಚೆಗೆ ಕಾರಣವಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular