HomeKarnatakaಯತೀಂದ್ರ ಸಿದ್ದರಾಮಯ್ಯ ನಮ್ಮ ಹೈಕಮಾಂಡ್: ಡಿಕೆಶಿ ಖಡಕ್ ಪ್ರತಿಕ್ರಿಯೆ

ಯತೀಂದ್ರ ಸಿದ್ದರಾಮಯ್ಯ ನಮ್ಮ ಹೈಕಮಾಂಡ್: ಡಿಕೆಶಿ ಖಡಕ್ ಪ್ರತಿಕ್ರಿಯೆ

ಮುಖ್ಯಮಮಂತ್ರಿ ಸಿದ್ದರಾಮಯ್ಯ ಪುತ್ರ, ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಶುಕ್ರವಾರ ರಾಜ್ಯ ರಾಜಕೀಯದಲ್ಲಿ ಮತ್ತೆ ನಾಯಕತ್ವ ಬದಲಾವಣೆ ಚರ್ಚೆಯನ್ನು ಹುಟ್ಟು ಹಾಕಿದೆ.

ಮೈಸೂರಿನಲ್ಲಿ ಶುಕ್ರವಾರ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, “ಐದು ವರ್ಷವೂ ನಮ್ಮ ತಂದೆಯವರೇ ಸಿಎಂ. ಹೈಕಮಾಂಡ್ ಈ ಬಗ್ಗೆ ನಮ್ಮ ತಂದೆಗೆ ಗ್ರೀನ್ ಸಿಗ್ನಲ್ ಕೊಟ್ಟಿದೆ. ಯಾರೋ ಕೆಲವರು ನಾಯಕತ್ವ ಬದಲಾವಣೆ ಬಗ್ಗೆ ಪ್ರಯತ್ನ ಮಾಡಿದ್ದರು. ಆ ಪ್ರಯತ್ನಕ್ಕೆ ಹೈಕಮಾಂಡ್ ಸೊಪ್ಪು ಹಾಕಿಲ್ಲ” ಎಂದು ಹೇಳಿದರು.

ಈ ಹೇಳಿಕೆ ಮೂಲಕ ಅವರು ನಾಯಕತ್ವ ಬದಲಾವಣೆ ಚರ್ಚೆಯನ್ನು ಮತ್ತಷ್ಟು ಬಿಸಿಯಾಗಿಸಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈ ಹೇಳಿಕೆಗೆ ಖಡಕ್ ಆಗಿಯೇ ತಿರುಗೇಟು ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯತೀಂದ್ರ ಹೈಕಮಾಂಡ್: ಮಂಗಳೂರಿನಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, “ಯತೀಂದ್ರ ಸಿದ್ದರಾಮಯ್ಯ ಅವರೇ ನಮ್ಮ ಹೈಕಮಾಂಡ್. ಅವರು ಏನು ಹೇಳುತ್ತಾರೋ ಅದನ್ನು ಗೌರವದಿಂದ ಸ್ವೀಕಾರ ಮಾಡುತ್ತೇನೆ. ಅವರೇ ಹೈಕಮಾಂಡ್ ಎಂಬಂತೆ ಹೇಳಿಕೆ ನೀಡಿರುವಾಗ ಅವರನ್ನೇ ಹೈಕಮಾಂಡ್ ಎಂದು ಸ್ವೀಕಾರ ಮಾಡೋಣ” ಎಂದು ಖಡಕ್ ಆಗಿ ತಿರುಗೇಟು ಕೊಟ್ಟರು.

“ಬಸವರಾಜು, ಯತೀಂದ್ರ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಏನೇ ಪ್ರತಿಕ್ರಿಯೆ ನೀಡುವುದಿದ್ದರೂ ದೆಹಲಿಯವರು ನೀಡಬೇಕು” ಎಂದರು.

ಬ್ರೇಕ್‌ ಫಾಸ್ಟ್ ಮೀಟಿಂಗ್: 2025ರ ನವೆಂಬರ್ 20ರ ಬಳಿಕ ನಾಯಕತ್ವ ಬದಲಾವಣೆ ಬಗ್ಗೆ ಕರ್ನಾಟಕ ಕಾಂಗ್ರೆಸ್‌ನಲ್ಲಿ ಭಾರೀ ಚರ್ಚೆಗಳು ನಡೆದವು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಿಎಂ ಆಗಬೇಕು ಎಂದು ಶಾಸಕರ ಸಹಿ ಸಂಗ್ರಹ ಮಾಡುತ್ತಿದ್ದಾರೆ ಎಂಬ ಸುದ್ದಿಗಳು ಸಹ ಹಬ್ಬಿದ್ದವು.

ಆಗ ನಾಯಕತ್ವ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ಎಂಟ್ರಿ ಆಗಿತ್ತು. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಜೊತೆಯಾಗಿ ಬ್ರೇಕ್‌ಫಾಸ್ಟ್ ಮೀಟಿಂಗ್ ಮಾಡಬೇಕು ಎಂದು ಸೂಚನೆ ನೀಡಿತ್ತು. ಅದರಂತೆ ಎರಡು ಬಾರಿ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಉಪಹಾರ ಕೂಟ ನಡೆಸಿದ್ದರು.

ಉಪಹಾರ ಕೂಟದ ಬಳಿಕ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಇಬ್ಬರು ಹೈಕಮಾಂಡ್ ಹೇಳಿದಂತೆ ನಾವು ಕೇಳುತ್ತೇವೆ ಎಂದು ಘೋಷಣೆ ಮಾಡಿದರು. ಬಳಿಕ ಬೆಳಗಾವಿಯ ಚಳಿಗಾಲದ ಅಧಿವೇಶನ ಆರಂಭವಾಯಿತು. ವಿಧಾನಸಭೆ ವಿಶೇಷ ಅಧಿವೇಶನ ನಡೆಯಿತು.

ಈಗ ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯ 17ನೇ ಬಜೆಟ್ ಮಂಡಿಸಲು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಇಂತಹ ಹೊತ್ತಿನಲ್ಲಿ ಪುನಃ ನಾಯಕತ್ವ ಬದಲಾವಣೆಯ ಚರ್ಚೆಗಳು ಜೋರಾಗಿದೆ.

ಡಿ.ಕೆ.ಶಿವಕುಮಾರ್ ಜೊತೆ ಉಪಹಾರ ಕೂಟದ ಬಳಿಕ ಮಾತನಾಡಿದ್ದ ಸಿದ್ದರಾಮಯ್ಯ, “ಪಕ್ಷದ ವರಿಷ್ಠರ ತೀರ್ಮಾನ, ಸೂಚನೆಯಂತೆ ನಾನು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡೆದುಕೊಳ್ಳುತ್ತೇವೆ ಎಂದು ನಾವಿಬ್ಬರೂ ತೀರ್ಮಾನಿಸಿದ್ದೇವೆ. ಸಚಿವರಾಗಲಿ, ಶಾಸಕರಾಗಲೀ ಯಾರೂ ನಮ್ಮ ಸರ್ಕಾರದ ವಿರುದ್ಧವಿಲ್ಲ” ಎಂದು ಹೇಳಿದ್ದರು.

“ಅಧಿವೇಶನ ಇರುವುದರಿಂದ ಇಬ್ಬರಿಗೂ ಗೊಂದಲಗಳನ್ನು ತಿಳಿಗೊಳಿಸುವಂತೆ ಹೈಕಮಾಂಡ್‌ನವರು ಸೂಚಿಸಿದ್ದಾರೆ. ಈಗಲೂ ಯಾವ ಗೊಂದಲ ಇಲ್ಲ, ನಾಳೆಯೂ ಯಾವುದೇ ಗೊಂದಲ ಇರುವುದಿಲ್ಲ. ನಮ್ಮ ನಡುವೆ ಆಗಿರುವ ಒಪ್ಪಂದದ ಬಗ್ಗೆ ಹೈಕಮಾಂಡಿಗೆ ಮಾಹಿತಿ ನೀಡಲಾಗುವುದು” ಎಂದು ತಿಳಿಸಿದ್ದರು.

“ಗೊಂದಲ ಸೃಷ್ಟಿಯಾಗಿರುವುದು ಕೆಲವು ಮಾಧ್ಯಮಗಳಿಂದ. ಕೆಲವು ಶಾಸಕರು ಸಚಿವ ಸಂಪುಟ ಪುನರ್ ರಚನೆಗೆ ಸಂಬಂಧಿಸಿದಂತೆ ದೆಹಲಿಗೆ ಭೇಟಿ ನೀಡಿರಬಹುದು. ಹಾಗೆಂದು ಬೇರೆ ಅರ್ಥ ಕಲ್ಪಿಸಬೇಕಿಲ್ಲ. ಕೆಲವರು ನನ್ನ ಬಳಿ ತಾವು ಇಂತಹ ಕಾರಣಕ್ಕೆ ದೆಹಲಿಗೆ ಭೇಟಿ ನೀಡಿರುವುದಾಗಿ ತಿಳಿಸಿದ್ದಾರೆ” ಎಂದು ಸ್ಪಷ್ಟಪಡಿಸಿದ್ದರು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular