ಪ್ರವಾದಿ ವಿರುದ್ಧ ಧರ್ಮನಿಂದನೆ ಹೇಳಿಕೆ: ಯತಿ ನರಸಿಂಹಾನಂದ ಸರಸ್ವತಿ ಅರೆಸ್ಟ್

 ಗಾಜಿಯಾಬಾದ್: ದಾಸ್ನಾ ದೇವಿ ದೇವಸ್ಥಾನದ ಮಹಾಂತ್ ಯತಿ ನರಸಿಂಹಾನಂದ ಸರಸ್ವತಿ ಅವರನ್ನು ಉತ್ತರ ಪ್ರದೇಶದ ಗಾಜಿಯಾಬಾದ್ ಪೊಲೀಸ್ ಲೈನ್‌ನಲ್ಲಿ ಬಂಧಿಸಲಾಗಿದೆ.

“ಪ್ರವಾದಿ ಮುಹಮ್ಮದ್ ವಿರುದ್ಧ ಧರ್ಮನಿಂದೆಯ ಹೇಳಿಕೆಗಳಿಗಾಗಿ” ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಶುಕ್ರವಾರ ರಾತ್ರಿ ಘಾಜಿಯಾಬಾದ್ ಮತ್ತು ಪಶ್ಚಿಮ ಯುಪಿಯ ಇತರ ಭಾಗಗಳಲ್ಲಿ ಮುಸ್ಲಿಂ ಸಮುದಾಯದ ಸದಸ್ಯರು ಬೃಹತ್ ಪ್ರತಿಭಟನೆಗಳನ್ನು ನಡೆಸಿದ್ದರು.

ಗಾಜಿಯಾಬಾದ್‌ನಲ್ಲಿ ದ್ವೇಷಪೂರಿತ ಭಾಷಣ ಮಾಡಿದ ಆರೋಪದ ಮೇಲೆ ಯತಿ ನರಸಿಂಹಾನಂದ ಸರಸ್ವತಿ ಅವರನ್ನು ಅಕ್ಟೋಬರ್ 4 ಶುಕ್ರವಾರದಂದು ಪ್ರಕರಣ ದಾಖಲಿಸಲಾಗಿದೆ.

ಗಾಜಿಯಾಬಾದ್‌ನ ಲೋಹಿಯಾ ನಗರದ ಹಿಂದಿ ಭವನದಲ್ಲಿ ಸೆಪ್ಟೆಂಬರ್ 29 ರಂದು ನಡೆದ ಕಾರ್ಯಕ್ರಮವೊಂದರಲ್ಲಿ ಉದ್ರೇಕಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಮಹಂತ್ ಯತಿ ನರಸಿಂಹಾನಂದ ಸರಸ್ವತಿ ವಿರುದ್ಧ ಗುರುವಾರ ಪ್ರಥಮ ಮಾಹಿತಿ ವರದಿ(ಎಫ್‌ಐಆರ್) ದಾಖಲಿಸಲಾಗಿದೆ. ಮುಸ್ಲಿಂ ಸಮುದಾಯದ ಜನರ ಭಾವನೆಗಳಿಗೆ ಧಕ್ಕೆ ತರುವಂತಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಸಿಹಾನಿ ಗೇಟ್ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ತ್ರಿವೇಂದ್ರ ಸಿಂಗ್ ಅವರ ದೂರಿನ ಮೇರೆಗೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವ ಹಿನ್ನೆಲೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಸಿಹಾನಿ ಗೇಟ್‌ನ ಸ್ಟೇಷನ್ ಹೌಸ್ ಆಫೀಸರ್(ಎಸ್‌ಹೆಚ್‌ಒ) ಸಚಿನ್ ಕುಮಾರ್, ‘ವೈರಲ್ ವೀಡಿಯೋ ಆಧರಿಸಿ ಎಫ್‌ಐಆರ್ ದಾಖಲಿಸಲಾಗಿದೆ.. ವೀಡಿಯೋವನ್ನು ಕೂಲಂಕುಷವಾಗಿ ಪರಿಶೀಲಿಸಿದ ನಂತರವೇ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read