HomeKarnatakaಕೋತಿ ತಾನು ತಿಂದು ಮೇಕೆ ಮೂತಿಗೆ ಒರೆಸಿದಂತಿದೆ: 'ಹಲೋ ಅಪ್ಪಾ' ಖ್ಯಾತಿಯ ಯತೀಂದ್ರ ಸಿದ್ದರಾಮಯ್ಯ ವಿರುದ್ಧ...

ಕೋತಿ ತಾನು ತಿಂದು ಮೇಕೆ ಮೂತಿಗೆ ಒರೆಸಿದಂತಿದೆ: ‘ಹಲೋ ಅಪ್ಪಾ’ ಖ್ಯಾತಿಯ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಂಗಳೂರು: ಕೋತಿ ತಾನು ತಿಂದು ಮೇಕೆ ಮೂತಿಗೆ ಒರೆಸಿತೆಂಬ ಮಾತು ಹಲೋ ಅಪ್ಪಾ ಖ್ಯಾತಿಯ ಯತೀಂದ್ರ ಸಿದ್ದರಾಮಯ್ಯ ಅವರನ್ನು ನೋಡಿಯೇ ಹೇಳಿದಂತಿದೆ! ಎಂದು ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಿಡಿಕಾರಿದೆ.

ಕೆಲ ಕೋರ್ಟ್‌ಗಳು ಕೇಂದ್ರ ಸರ್ಕಾರದ ಮಾತು ಕೇಳುತ್ತಿವೆ ಎಂದು ಹೇಳುವ ಮೂಲಕ ದೇಶದ ಘನ ನ್ಯಾಯಾಂಗ ವ್ಯವಸ್ಥೆಯನ್ನೇ ಅವಮಾನಿಸಿದ್ದಾರೆ ಯತೀಂದ್ರ. ಸರ್ವಾಧಿಕಾರಿ ಸಿದ್ದರಾಮಯ್ಯನವರ ಪುತ್ರ ಮರಿ ಸರ್ವಾಧಿಕಾರಿಯಂತೆ ಸಂವಿಧಾನದ ಬುಡಕ್ಕೆ ಕೊಡಲಿ ಹಾಕಲು ಹೊರಟಿದ್ದಾರೆ ಎಂದು ವಾಗ್ದಾಳಿ ನಡೆಸಿದೆ.

ಜನಪ್ರತಿನಿಧಿಗಳ ನ್ಯಾಯಾಲಯ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಕೇಸ್ ದಾಖಲಿಸಿ, ತನಿಖೆ ನಡೆಸಲು ಆದೇಶ ನೀಡಿದ್ದಕ್ಕೆ ಈ ಪರಿ ನ್ಯಾಯಾಂಗ ನಿಂದನೆ ಮಾಡುವ ಹಲೋ ಅಪ್ಪಾ, ನಾಳೆ ಸಿದ್ದರಾಮಯ್ಯ ಜೈಲಿಗೆ ಹೋದರೆ ಡಾ.ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವೇ ಸರಿಯಿಲ್ಲ ಎಂದರೂ ಆಶ್ಚರ್ಯವಿಲ್ಲ ಎಂದು ಟೀಕಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular