HomeKarnatakaಆಶ್ರಯ ಸಮಿತಿ ಅಧ್ಯಕ್ಷರಾಗಿ ಯತೀಂದ್ರ ಸಿದ್ದರಾಮಯ್ಯ ನೇಮಕ

ಆಶ್ರಯ ಸಮಿತಿ ಅಧ್ಯಕ್ಷರಾಗಿ ಯತೀಂದ್ರ ಸಿದ್ದರಾಮಯ್ಯ ನೇಮಕ

ಮೈಸೂರು: ಆಶ್ರಯ ಸಮಿತಿ ಅಧ್ಯಕ್ಷರಾಗಿ ಡಾ.ಯತೀಂದ್ರ ಸಿದ್ದರಾಮಯ್ಯ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಈ ಕುರಿತು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ, ಆಶ್ರಯ ಸಮಿತಿ ಅಧ್ಯಕ್ಷರಾಗಿ ಯತೀಂದ್ರ ಸಿದ್ದರಾಮಯ್ಯ ನೇಮಕ ಮಾಡಿ 15 ದಿನಗಳ ಹಿಂದೆಯೇ ಆದೇಶ ಹೊರಡಿಸಲಾಗಿದೆ. ಪ್ರಮುಖವಾಗಿ ವರುಣಾ ಕ್ಷೇತ್ರದ ಜನತೆಯ ಸಮಸ್ಯೆಯನ್ನು ಆಲಿಸುತ್ತೇನೆ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಲೋಕಸಭಾ ಚುನಾವಣೆಗೆ ಸ್ಪರ್ಧೆ ವಿಚಾರವಾಗಿ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಲೋಕಸಭಾ ಚುನಾವಣೆಗಾಗಿ ನನ್ನದು ಯಾವುದೇ ಬೇಡಿಕೆ ಇಲ್ಲ. ಪಕ್ಷದ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ. ಪಕ್ಷ ಸೂಚಿಸಿದರೆ ನಾನು ಅಭ್ಯರ್ಥಿಯಾಗುತ್ತೇನೆ ಎಂದು ಹೇಳಿದರು.

ರಾಜ್ಯದಲ್ಲಿ ಬಿಜೆಪಿ ದುರಾಡಳಿತಕ್ಕೆ ಬೇಸತ್ತು ಜನ ನಮಗೆ ಗೆಲುವು ನೀಡಿದ್ದಾರೆ. ಕೊಟ್ಟ ಮಾತಿನಂತೆ ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಲೋಕಸಭಾ ಚುನಾವಣೆಯಲ್ಲಿಯೂ ನಾವು ಅತಿ ಹೆಚ್ಚು ಸೀಟ್ ಗೆಲ್ಲಬೇಕಿದೆ ಎಂದರು.

 

For Latest News Updates, Join Our Whatsapp Community🚩
RELATED ARTICLES

Most Popular