HomeLatest NewsBIG NEWS: ನಾಯಕತ್ವ ಬದಲಾವಣೆ ಇಲ್ಲ; 5 ವರ್ಷ ಸಿದ್ದರಾಮಯ್ಯನವರೇ ಸಿಎಂ: ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ

BIG NEWS: ನಾಯಕತ್ವ ಬದಲಾವಣೆ ಇಲ್ಲ; 5 ವರ್ಷ ಸಿದ್ದರಾಮಯ್ಯನವರೇ ಸಿಎಂ: ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ

ಬೆಳಗಾವಿ: ನಾಯಕತ್ವ ಬದಲಾವಣೆ ಇಲ್ಲ, ಈ ಬಗ್ಗೆ ಹೈಕಮಾಂಡ್ ನಾಯಕರು ಒಪ್ಪಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ, ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಸಿದ್ದರಾಮಯ್ಯನವರೇ 5 ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ. ಯಾವುದೇ ನಾಯಕತ್ವ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ನಾಯಕತ್ವ ಬದಲಾವಣೆ ಬಗ್ಗೆ ಗೊಂದಲಗಳು ಇದ್ದವು. ಡಿ.ಕೆ.ಶಿವಕುಮಾರ್ ಅವರು ಅವಕಾಶ ಕೇಳಿದ್ದರು. ಆದರೆ ನಾಯಕತ್ವ ಬದಲಾವಣೆ ಪರಿಸ್ಥಿತಿ ಇಲ್ಲ ಎಂದು ಹೈಕಮಾಂಡ್ ಹೇಳಿದೆ. ಹಾಗಾಗಿ ಎಲ್ಲಾ ಗೊಂದಲಗಳು ನಿವಾರಣೆಯಾಗಿವೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್ ನಲ್ಲಿ ಅಧಿಕಾರಕ್ಕಾಗಿ ಕಿತ್ತಾಟ ನಡೆದಿಲ್ಲ. ಇದೆಲ್ಲವೂ ವಿಪಕ್ಷಗಳ ಸೃಷ್ಟಿ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದಲೂ ಸಿಎಂ ಬದಲಾಗುತ್ತಾರೆ ಎಂದು ಹೇಳುತ್ತಲೇ ಇದ್ದಾರೆ. ಆದರೆ ಸಿಎಂ ಬದಲಾವಣೆ ಎಂಬ ಕನಸು ಕಾಣಬೇಕು ಅವರು ಅಷ್ಟೇ. ದೆಹಲಿಯಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ 5 ವರ್ಷ ಪೂರೈಸುತ್ತಾರೆ. ಈ ಬಗ್ಗೆ ನನಗೆ ನಂಬಿಕೆ ಇದೆ. ಹೈಕಮಾಂಡ್ ನಾಯಕರು ಸಿಎಂ ಸಿದ್ದರಾಮಯ್ಯನವರನ್ನು ದೆಹಲಿಗೆ ಕರೆದೂ ಇಲ್ಲ ಎಂದು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular