ಮೈಸೂರು: ವರುಣಾ ಕ್ಷೇತ್ರಕ್ಕೆ ಭೇಟಿ ನೀಡಿರುವ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ ಭಾವುಕರಾಗಿ ಮಾತನಾಡಿದ್ದಾರೆ. ಕ್ಷೇತ್ರದ ಜನರು ಯಾವಾಗಲೂ ನನ್ನನ್ನು ಬೆಂಬಲಿಸಿದ್ದೀರಿ. ನನಗೆ ಮತ ನೀಡಿ ತಂದೆ ಮುಖ್ಯಮಂತ್ರಿಯಾಗಲು ಕಾರಣರಾಗಿದ್ದೀರಿ ಎಂದು ಅಭಿನಂದನೆ ತಿಳಿಸಿದ್ದಾರೆ.
ಮೈಸೂರಿನ ವರುಣ ಕ್ಷೇತ್ರದ ಸೋಮೇಶ್ವರಪುರದಲ್ಲಿ ಮಾತನಾಡಿದ ಯತೀಂದ್ರ, ನಾನು ಈ ಹಿಂದೆ ಶಾಸಕನಾಗಲೂ ನೀವೇ ಕಾರಣ. ನಿಮ್ಮ ಅಭಿಮಾನಕ್ಕೆ ನಾನು ಚಿರಋಣಿಯಾಗಿದ್ದೇನೆ ಎಂದು ವರುಣ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ.