ಬಿ.ವೈ.ವಿಜಯೇಂದ್ರ ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ: ಬಿಜೆಪಿ ರಾಜ್ಯಾಧ್ಯಕ್ಷರನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಆಯ್ಕೆ ಮಾಡುವ ಸ್ಥಿತಿ ಬಂದಿದೆ: ಯತ್ನಾಳ್ ವಾಗ್ದಾಳಿ

ಬೆಂಗಳೂರು: ಬಿಜೆಪಿಯಲ್ಲಿ ಆತಂಕರಿಕ ಕಲಹ, ಬಣ ಬಡಿದಾಟ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಬಿ.ವೈ.ವಿಜಯೇಂದ್ರ ಕಾಂಗ್ರೆಸ್ ಜೊತೆಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಯಾರನ್ನು ಆಯ್ಕೆ ಮಡಬೇಕು ಎಂಬುದನ್ನು ಕಾಂಗ್ರೆಸ್ ನವರು ನಿರ್ಧಿಸಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಬಿಜೆಪಿ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡುವ ಸ್ಥಿತಿ ಬಂದಿದೆ ಎಂದು ಕಿಡಿಕಾರಿದ್ದಾರೆ.

ಸಿಎಂ, ಡಿಸಿಎಂ ವಿಜಯೇಂದ್ರ ನೀನೇ ರಾಜ್ಯಾಧ್ಯಕ್ಷನಾಗಬೇಕು ಎಂದು ಹೇಳಿದ್ದಾರೆ. ಇವರು ಆಗಿದ್ದಾರೆ. ವಿಜಯೇಂದ್ರ ಮನೆಯಲ್ಲಿ ಭಯದ ವಾತಾವರಣವಿರಬಹುದು. ಆದರೆ ನಮಗೆ ಯಾವ ಭಯವಿಲ್ಲ. ಹೆಚ್ಚು ಎಂದರೆ ನಮ್ಮನ್ನು ಪಕ್ಷದಿಂದ ಉಚ್ಛಾಟಿಸಬಹುದು. ಅದಕ್ಕೂ ನಾವು ಸಿದ್ಧರಿದ್ದೇವೆ. ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಬದಲಾಗುವವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಹೇಳಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read