HomeKarnatakaಸಿದ್ಧರಾಮಯ್ಯರನ್ನು ಕೆಳಗಿಳಿಸಲು ಕಾಂಗ್ರೆಸ್ ನಲ್ಲೇ ಷಡ್ಯಂತ್ರ: ಹರಿಪ್ರಸಾದ್, ಶಾಮನೂರುಗೆ ಡಿಕೆಶಿ ಡೈರೆಕ್ಷನ್: ಯತ್ನಾಳ್ ಬಾಂಬ್

ಸಿದ್ಧರಾಮಯ್ಯರನ್ನು ಕೆಳಗಿಳಿಸಲು ಕಾಂಗ್ರೆಸ್ ನಲ್ಲೇ ಷಡ್ಯಂತ್ರ: ಹರಿಪ್ರಸಾದ್, ಶಾಮನೂರುಗೆ ಡಿಕೆಶಿ ಡೈರೆಕ್ಷನ್: ಯತ್ನಾಳ್ ಬಾಂಬ್

ಯಾದಗಿರಿ: ಲೋಕಸಭೆ ಚುನಾವಣೆಯ ಬಳಿಕ ರಾಜ್ಯದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ಬಿಜೆಪಿ ನಾಯಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಯಾದಗಿರಿ ಜಿಲ್ಲೆ ಶಹಾಪುರದಲ್ಲಿ ಮಾತನಾಡಿದ ಬಿಜೆಪಿ ಶಾಸಕ ಯತ್ನಾಳ್, ಈಗ ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ. ನಾನು ಮೊದಲೇ ಹೇಳಿದ್ದೇನೆ. ಡಿಸೆಂಬರ್ ತನಕ ಈ ಸರ್ಕಾರ ಇರುವುದಿಲ್ಲ. ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಇಳಿಸಲು ಡಿ.ಕೆ. ಶಿವಕುಮಾರ್ ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿದ್ದರಾಮಯ್ಯ ಅವರನ್ನು ಇಳಿಸಲು ಡಿ.ಕೆ. ಶಿವಕುಮಾರ್ ಷಡ್ಯಂತ್ರ ಮಾಡುತ್ತಿದ್ದು, ಶಾಮನೂರು ಶಿವಶಂಕರಪ್ಪ ಮತ್ತು ಬಿ.ಕೆ. ಹರಿಪ್ರಸಾದ್ ಮಾತನಾಡಲು ಡಿ.ಕೆ. ಶಿವಕುಮಾರ್ ಅವರದ್ದೇ ಡೈರೆಕ್ಷನ್ ಎಂದು ಯತ್ನಾಳ್ ಆರೋಪಿಸಿದ್ದಾರೆ.

ಕಾಂಗ್ರೆಸ್ ನಲ್ಲಿ ಆಂತರಿಕ ಕಚ್ಚಾಟ ಇದೆ. ನಾಲ್ಕೈದು ಬಾರಿ ಶಾಸಕರಾದರೂ ಸಚಿವರಾಗಿಲ್ಲ ಎನ್ನುವ ಅಸಮಾಧಾನ ಇದೆ. ಕಾಂಗ್ರೆಸ್ ನಲ್ಲಿ ದೊಡ್ಡ ಷಡ್ಯಂತ್ರ ನಡೆಯುತ್ತಿದೆ. ಈ ಸರ್ಕಾರ ಬಹಳ ದಿನ ಇರಲ್ಲ. ಕಾಂಗ್ರೆಸ್ ಸರ್ಕಾರದಲ್ಲಿ ಬಹಳಷ್ಟು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular