HomeKarnatakaBIG NEWS: ಶೀಘ್ರದಲ್ಲಿಯೇ ಮತ್ತೊಂದು ಸಿಡಿ ಫ್ಯಾಕ್ಟರಿ ಓಪನ್ ಆಗಲಿದೆ; SIT ಡಿ.ಕೆ.ಶಿವಕುಮಾರ್ ಕೈಗೊಂಬೆಯಾಗಿದೆ; ಬಿಜೆಪಿ...

BIG NEWS: ಶೀಘ್ರದಲ್ಲಿಯೇ ಮತ್ತೊಂದು ಸಿಡಿ ಫ್ಯಾಕ್ಟರಿ ಓಪನ್ ಆಗಲಿದೆ; SIT ಡಿ.ಕೆ.ಶಿವಕುಮಾರ್ ಕೈಗೊಂಬೆಯಾಗಿದೆ; ಬಿಜೆಪಿ ಶಾಸಕ ಯತ್ನಾಳ್ ವಾಗ್ದಾಳಿ

ವಿಜಯಪುರ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ನಾನು ಈ ಹಿಂದೆಯೇ ಭವಿಷ್ಯ ಹೇಳಿದ್ದೆ. ರಾಜ್ಯದಲ್ಲಿ ಎರಡು ಸಿಡಿ ಫ್ಯಾಕ್ಟರಿಗಳಿವೆ ಎಂದು ಈಗ ಒಂದು ಓಪನ್ ಆಗಿದೆ. ಮತ್ತೊಂದು ಶೀಘ್ರದಲ್ಲಿ ಓಪನ್ ಆಗಲಿದೆ ಎಂದು ಹೇಳಿದ್ದಾರೆ.

ವಿಜಯಪುರದಲ್ಲಿ ಲೋಕಸಭಾ ಚುನಾವಣೆ ಮತದಾನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಯತ್ನಾಳ್, ಶೀಘ್ರದಲ್ಲಿಯೇ ಮತ್ತೊಂದು ಸಿಡಿ ಫ್ಯಾಕ್ಟರಿ ಓಪನ್ ಆಗಲಿದೆ. ಅದು ಯಾರದ್ದು, ಯಾರಿಗೆ ಸಂಬಂಧಿಸಿದ್ದು ಎಂಬುದು ಶೀಘ್ರ ಗೊತ್ತಾಗಲಿದೆ ಎಂದಿದ್ದಾರೆ.

ಪ್ರಜ್ವಲ್ ಅಶ್ಲೀಲ ವಿಡಿಯೋ ಬಹಿರಂಗ ಹಿಂದೆ ಡಿಸಿಎಂ ಡಿ.ಕೆ.ಶಿವಕುಮಾರ್ ಕೈವಾಡವಿದೆ ಎಂದು ವಕೀಲ ದೇವರಾಜೇಗೌಡ ಹೇಳಿಕೆ ನೀಡಿದ್ದಾರೆ. ಇದರ ಹಿಂದೆ ಡಿಕೆಶಿ ಕೈವಾಡವಿರುವುದು ಸ್ಪಷ್ಟ. ಎಸ್ಐಟಿ ಸಂಪೂರ್ಣವಾಗಿ ಡಿ.ಕೆ.ಶಿ ವಶದಲ್ಲಿದೆ. ಅವರ ಅಣತಿಯಂತೆ ಕೆಲಸ ಮಾಡ್ತಾರೆ. ಹೀಗಿರುವಾಗ ಎಸ್ಐಟಿಯಿಂದ ಸೂಕ್ತ ತನಿಖೆಯಾಗುವುದು ಅನುಮಾನ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular