ಮೂಲ ಕಾಂಗ್ರೆಸ್ ನವರಿಂದಲೇ ಸಿದ್ದರಾಮಯ್ಯ ಬಲಿಪಶು: ಬಿಜೆಪಿ ಶಾಸಕ ಯತ್ನಾಳ್ ಸ್ಪೋಟಕ ಹೇಳಿಕೆ

ಬೆಳಗಾವಿ: ಮೂಲ ಕಾಂಗ್ರೆಸ್ ನವರಿಂದಲೇ ಸಿದ್ದರಾಮಯ್ಯ ಬಲಿ ಪಶು ಆಗಿದ್ದಾರೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಬೈಲಹೊಂಗಲದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನವರೇ ಸಿದ್ದರಾಮಯ್ಯ ಅವರನ್ನು ಬಲಿಪಶು ಮಾಡಿದ್ದಾರೆ. ಬಹುದಿನಗಳ ಹಿಂದಿನ ಪ್ರಕರಣವನ್ನು ಬಯಲಿಗೆಳೆದವರು ಮೂಲ ಕಾಂಗ್ರೆಸ್ ನವರು. ಬಿಜೆಪಿಯ ಸಮರ್ಪಕ ಹೋರಾಟದಿಂದ ಪ್ರಕರಣ ಈ ಹಂತಕ್ಕೆ ಬಂದಿದೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತನಿಖೆ ಎದುರಿಸಲಿ, ಆಗದಿದ್ದರೆ ರಾಜೀನಾಮೆ ನೀಡಲಿ. ನ್ಯಾಯಾಲಯ ತೀರ್ಪು ನೀಡಿದ ನಂತರ ರಾಜ್ಯದ ಜನ ನಿಮ್ಮನ್ನು ಒಪ್ಪುವುದಿಲ್ಲ. ನಿಮ್ಮ ಸುತ್ತಮುತ್ತಲಿನವರ ಮಾತು ಕೇಳಿ ಭವಿಷ್ಯ ಹಾಳು ಮಾಡಿಕೊಳ್ಳಬೇಡಿ. ರಾಜ್ಯದಲ್ಲಿ ನಿಮ್ಮ ಶಕ್ತಿ ಇದ್ದಷ್ಟು ಯಾರ ಕಡೆಗೂ ಇಲ್ಲ. ನಿಮ್ಮ ಹಿಂದೂ ವಿರೋಧಿ ಧೋರಣೆ ಬಿಡಿ ಎಂದು ಸಲಹೆ ನೀಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಯಾವುದೇ ಒತ್ತಡಕ್ಕೆ ಒಳಗಾಗದೆ ಸೂಕ್ತ ರೀತಿಯಲ್ಲಿ ತನಿಖೆ ನಡೆಸಬೇಕು ಎಂದು ಯತ್ನಾಳ್ ಒತ್ತಾಯಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read