ಯಾವುದೇ ಷರತ್ತಿಲ್ಲದೇ ಮಹದೇವಪ್ಪ, ಕಾಕಾ ಪಾಟೀಲ್ ಸೇರಿ ಎಲ್ಲರಿಗೂ ಕೊಡಬೇಕು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಬಗ್ಗೆ ಯತ್ನಾಳ್ ಟ್ವೀಟ್

ಯಾವುದೇ ಷರತ್ತಿನ ಬಗ್ಗೆ ಹೇಳದೆ “ಎಲ್ಲಾ ಉಚಿತ, ಖಚಿತ ಹಾಗು ನಿಶ್ಚಿತ” ಎಂದು ಘೋಷಣೆ ಮಾಡಿದ್ದ ಕಾಂಗ್ರೆಸ್ ಸರ್ಕಾರ ಈಗ ಷರತ್ತುಗಳನ್ನು ವಿಧಿಸಿ ಕರ್ನಾಟಕದ ಮಹಾಜನತೆಗೆ ಮೋಸ ಮಾಡಿದೆ ಎಂದು ಬಿಜೆಪಿ ನಾಯಕ ಬಸವನಗೌಡ ಪಾಟೀಲ್ ಯತ್ನಾಳ್ ಟೀಕಿಸಿದ್ದಾರೆ.

ಯಾರು ಹೆಚ್ಚಾದ ಕರೆಂಟ್ ಬಿಲ್ ಪಾವತಿ ಮಾಡಬೇಡಿ, 200 ಯೂನಿಟ್ ಒಳಗೆ ಬಳಸುವವರು ಕರೆಂಟ್ ಬಿಲ್ ನೀಡುವವರನ್ನು ವಾಪಸ್ ವಿನಮ್ರತೆಯಿಂದ ಕಳುಹಿಸಿ. ಮಹಿಳೆಯರು ಎಲ್ಲಾ ಬಸ್ ಗಳಲ್ಲೂ ಟಿಕೆಟ್ ತೆಗೆದುಕೊಳ್ಳಬೇಡಿ, ಕಂಡೆಕ್ಟರ್ ಹಾಗು ಸಿಬ್ಬಂದಿಗೆ ಸಿದ್ದರಾಮಯ್ಯರನ್ನು ಕೇಳಿ ಎಂದು ಹೇಳಿ ಎಂದು ಯತ್ನಾಳ್ ಟ್ವೀಟ್ ಮಾಡಿದ್ದಾರೆ.

ನೀರಿನ ಬಿಲ್ ಹೆಚ್ಚಾದರೆ ವಾಪಸ್ ಕಳುಹಿಸಿ. 2000 ರೂ ಪಡೆಯಲು ಎಲ್ಲ ಮಹಿಳೆಯರು ನೋಂದಾಯಿಸಿ. ಸರ್ಕಾರದ ವಿರುದ್ಧ ಜನಾಂದೋಲನ ಆಗಬೇಕಿದೆ, ಕೊಟ್ಟ ಮಾತನ್ನು ಕಾಂಗ್ರೆಸ್ ಸರ್ಕಾರ ಈಡೇರಿಸಬೇಕು. ಮಹದೇವಪ್ಪನಿಗೂ ಕೊಡಬೇಕು, ಕಾಕಪಾಟಿಲನಿಗೂ ಕೊಡಬೇಕು, ಎಲ್ಲರಿಗೂ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.

https://twitter.com/BasanagoudaBJP/status/1667405569609846785

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read