ವಿಜಯಪುರ: ಮುಸ್ಲಿಂ ಯುವತಿಯರನ್ನು ವಿವಾಹವಾದರೆ ಹಿಂದೂ ಯುವಕರಿಗೆ 5 ಲಕ್ಷ ನೀಡುವುದಾಗಿ ಘೋಷಿಸಿ ವಿವಾದಕ್ಕೀಡಾಗಿದ್ದ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೂ ಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಯತ್ನಾಳ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳುವಂತಿಲ್ಲ ಎಂದು ಕಲಬುರಗಿ ವಿಭಾಗೀಯ ಪೀಠ ಮಧ್ಯಂತರ ಆದೇಶ ಹೊರಡಿಸಿದೆ.
ಕೊಪ್ಪಳ ಜಿಲ್ಲೆಯಲ್ಲಿ ಕಳೆದ ತಿಂಗಳು ಶಾಸಕ ಯತ್ನಾಳ್, ಮುಸ್ಲಿಂ ಯುವತಿಯರನ್ನು ವಿವಾಹವಾಗುವ ಹಿಂದೂ ಯುವಕರಿಗೆ 5 ಲಕ್ಷ ಹಣ ನೀಡುವುದಾಗಿ ಘೋಷಿಸಿದ್ದರು. ಯತ್ನಾಳ್ ಹೇಳಿಕೆ ವಿರುದ್ಧ ಮೂರು ಕೇಸ್ ಗಳು ದಾಖಲಾಗಿದ್ದವು. ವಿಜಯಪುರ, ಕಲಬುರಗಿ ಹಾಗೂ ಕೊಪ್ಪಳದಲ್ಲಿ ಕೇಸ್ ದಾಖಲಾಗಿತ್ತು.
ವಿಜಯಪುರ, ಕಲಬುರ್ಗಿಯಲ್ಲಿ ದಾಖಲಾಗಿದ್ದ ಕೇಸ್ ನ್ನು ಪೊಲೀಸರು ಕೊಪ್ಪಳಕ್ಕೆ ವರ್ಗಾಯಿಸಿದ್ದರು. ತನ್ನವಿರುದ್ಧದ ದೂರನ್ನು ರದ್ದುಗೊಳಿಸುವಂತೆ ಕೋರಿ ಯತ್ನಾಳ್ ಕಲಬುರ್ಗಿ ವಿಭಾಗೀಯ ಪೀಠಕ್ಕೆ ಅರ್ಜಿ ಸಲ್ಲಿಸಿಇದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಯತ್ನಾಳ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳುವಂತಿಲ್ಲ ಎಂದು ಮಧ್ಯಂತರ ಆದೇಶ ಹೊರಡಿಸಿದೆ.