HomeLatest NewsBIG NEWS: ಕಸ, ಸಗಣಿ ಮೇಲೆ ಕಲ್ಲು ಹಾಕಲು ಇಷ್ಟವಿಲ್ಲ: ಯತ್ನಾಳ್ ಗೆ ಡಿಸಿಎಂ ಡಿ.ಕೆ.ಶಿವಕುಮಾರ್...

BIG NEWS: ಕಸ, ಸಗಣಿ ಮೇಲೆ ಕಲ್ಲು ಹಾಕಲು ಇಷ್ಟವಿಲ್ಲ: ಯತ್ನಾಳ್ ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಒಂದು ಕಾಲು ಬಿಜೆಪಿಯಲ್ಲಿಟ್ಟಿದ್ದಾರೆ. ಈಗಾಗಲೇ ದೆಹಲಿಯಲ್ಲಿ ವಿಜಯೇಂದ್ರ ಜೊತೆ ಒಂದು ಚರ್ಚೆಯನ್ನೂ ನಡೆಸಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಡಿದ್ದ ಆರೋಪಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಯತ್ನಾಳ್ ಹೇಳಿಕೆ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಕಸ, ಸಗಣಿ ಮೇಲೆ ಕಲ್ಲು ಹಾಕಲು ನನಗೆ ಇಷ್ಟವಿಲ್ಲ ಎಂದಷ್ಟೇ ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಶಾಸಕ ಯತ್ನಾಳ್, ಡಿಸಿಎಂ ಡಿ.ಕೆ.ಶಿವಕುಮಾರ್ ಒಂದು ಕಾಲು ಬಿಜೆಪಿಯಲ್ಲಿ ಇಟ್ಟಿದ್ದಾರೆ. ಬಿಜೆಪಿ ಜೊತೆ ಸಹ ಡಿ.ಕೆ.ಶಿವಕುಮಾರ್ ಒಂದು ಚರ್ಚೆ ಮಾಡಿದ್ದಾರೆ. ಈಗಾಗಲೇ ದೆಹಲಿಯಲ್ಲಿ ವಿಜಯೇಂದ್ರ ಜೊತೆ ಸೇರಿ ಒಂದು ಸುತ್ತಿನ ಚರ್ಚೆಯನ್ನೂ ನಡೆಸಿದ್ದಾರೆ. ಒಟ್ಟು 60ರಿಂದ 70 ಕಾಂಗ್ರೆಸ್ ಶಾಸಕರನ್ನು ಕರೆತಂದು… ಇದರ ಮುಂದುವರೆದ ಭಾಗವೇ ನಮಸ್ತೇ ಸದಾ ವತ್ಸಲೇ ಹಾಡುತ್ತೇವೆ ಅಂತಾ ಹೇಳಿದ್ದಾರೆ ಎಂದಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಮೂಲಕ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಡಿಸಿಎಂ ಡಿ.ಕೆ.ಶಿವಕುಮಾರ್ ಕಡೆ 12 ಶಾಸಕರಿಲ್ಲ ಎಂದು ಆಂತರಿಕ ವರದಿ ಬಂದಿದೆ. ಎಲ್ಲಾ ಸಿದ್ದರಾಮಯ್ಯನವರ ಪರ ಇದ್ದಾರೆ. ಹಾಗಾಗಿ ಸರ್ಕಾರ ಮಾಡಲು ಪ್ರಯತ್ನಿಸಲ್ಲ ಅಂತಾ ಬಿಜೆಪಿ ಹೇಳಿತು ಎಂದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular