ಕೊಪ್ಪಳ: ಪ್ರಚೋದನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕೊಪ್ಪಳ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಮುಸ್ಲಿಂ ಯುವತಿಯರನ್ನು ಮದುವೆಯಾದವರಿಗೆ ೫ ಲಕ್ಷ ಹಣ ನೀಡುವುದಾಗಿ ಘೋಷಣೆ ಮಾಡುವ ಮೂಲಕ ಹಿಂದೂ ಮುಸ್ಲಿಂರ ನಡುವೆ ಸೌಹಾರ್ದಕ್ಕೆ ಧಕ್ಕೆ ತರುವ ರೀತಿಯಲ್ಲಿ ಮಾತನಾಡಿದ್ದರು. ಅಲ್ಲದೇ ಕೊಲೆ ಮಾಡುವ ಮುಸ್ಲಿಂ ಯುವಕರಿಗೆ ಉತ್ತರ ನೀಡಬೇಕಿದೆ. ರಾಜ್ಯದಲ್ಲಿ ಸಾಬರ ಸರ್ಕಾರವಿದೆ ಎಂದು ಝೇಳಿಕೆ ನೀಡಿದ್ದರು.
ಯತ್ನಾಳ್ ಹೇಳಿಕೆ ಬಗ್ಗೆ ಕುವೆಂಪು ನಗರ ನಿವಾಸಿ ಅಬ್ದುಲ್ ಕಲಾಂ ದೂರು ನೀಡಿದ್ದರು. ಯತ್ನಾಳ್ ಹೇಳಿಕೆಯಿಂದ ಹಿಂದೂ-ಮುಸ್ಲಿಂ ಧರ್ಮಗಳ ನಡುವೆ ದ್ವೇಷ ಬೆಳೆಯುವಂತಾಗಿದೆ ಮುಸ್ಲಿಂ ಮಹಿಳೆಯರಿಗೆ ಅಪಮಾನ ಮಾಡಲಾಗಿದೆ ಎಂದು ಆರೋಪಿಸಿದ್ದರು. ಪ್ರಚೋದನಕಾರಿ ಹೇಳಿಕೆ ಹಿನ್ನೆಲೆಯಲ್ಲಿ ಯತ್ನಾಳ್ ವಿರುದ್ಧ ಪ್ರಕರಣ ದಾಖಲಾಗಿದೆ.