HomeLatest NewsBIG NEWS: ಶಾಸಕ ಯತ್ನಾಳ್ ವಿರುದ್ಧ FIR ದಾಖಲು

BIG NEWS: ಶಾಸಕ ಯತ್ನಾಳ್ ವಿರುದ್ಧ FIR ದಾಖಲು

ಕೊಪ್ಪಳ: ಪ್ರಚೋದನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕೊಪ್ಪಳ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಮುಸ್ಲಿಂ ಯುವತಿಯರನ್ನು ಮದುವೆಯಾದವರಿಗೆ ೫ ಲಕ್ಷ ಹಣ ನೀಡುವುದಾಗಿ ಘೋಷಣೆ ಮಾಡುವ ಮೂಲಕ ಹಿಂದೂ ಮುಸ್ಲಿಂರ ನಡುವೆ ಸೌಹಾರ್ದಕ್ಕೆ ಧಕ್ಕೆ ತರುವ ರೀತಿಯಲ್ಲಿ ಮಾತನಾಡಿದ್ದರು. ಅಲ್ಲದೇ ಕೊಲೆ ಮಾಡುವ ಮುಸ್ಲಿಂ ಯುವಕರಿಗೆ ಉತ್ತರ ನೀಡಬೇಕಿದೆ. ರಾಜ್ಯದಲ್ಲಿ ಸಾಬರ ಸರ್ಕಾರವಿದೆ ಎಂದು ಝೇಳಿಕೆ ನೀಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯತ್ನಾಳ್ ಹೇಳಿಕೆ ಬಗ್ಗೆ ಕುವೆಂಪು ನಗರ ನಿವಾಸಿ ಅಬ್ದುಲ್ ಕಲಾಂ ದೂರು ನೀಡಿದ್ದರು. ಯತ್ನಾಳ್ ಹೇಳಿಕೆಯಿಂದ ಹಿಂದೂ-ಮುಸ್ಲಿಂ ಧರ್ಮಗಳ ನಡುವೆ ದ್ವೇಷ ಬೆಳೆಯುವಂತಾಗಿದೆ ಮುಸ್ಲಿಂ ಮಹಿಳೆಯರಿಗೆ ಅಪಮಾನ ಮಾಡಲಾಗಿದೆ ಎಂದು ಆರೋಪಿಸಿದ್ದರು. ಪ್ರಚೋದನಕಾರಿ ಹೇಳಿಕೆ ಹಿನ್ನೆಲೆಯಲ್ಲಿ ಯತ್ನಾಳ್ ವಿರುದ್ಧ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular