ವಿಪಕ್ಷ ನಾಯಕರಾಗಿ ಬಿಜೆಪಿ ಫೈರ್ ಬ್ರಾಂಡ್ ಯತ್ನಾಳ್…?

ಬೆಂಗಳೂರು: ವಿಧಾನಸಭೆ ಚುನಾವಣೆ ಸೋಲಿನ ನಂತರ ಬಿಜೆಪಿಯಲ್ಲಿ ವಿಪಕ್ಷ ನಾಯಕನ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕೆಂಬ ಚರ್ಚೆ ನಡೆದಿದೆ.

ಬಸವರಾಜ ಬೊಮ್ಮಾಯಿ ಅವರನ್ನೇ ಶಾಸಕಾಂಗ ಪಕ್ಷದ ನಾಯಕನಾಗಿ ಮುಂದುವರಿಸಲು ಪಕ್ಷದಲ್ಲಿ ಚಿಂತನೆ ನಡೆದಿದೆ. ಇದೇ ವೇಳೆ ಹೊಸಬರಿಗೆ ಅವಕಾಶ ಕೊಡುವ ಬಗ್ಗೆಯೂ ಚರ್ಚೆ ನಡೆದಿದ್ದು, ಕಾಂಗ್ರೆಸ್ ನಿಂದ ಯಾರು ಮುಖ್ಯಮಂತ್ರಿ ಆಗುತ್ತಾರೆ ಎಂಬುದನ್ನು ನೋಡಿಕೊಂಡು ಬಿಜೆಪಿ ಶಾಸಕಾಂಗ ಪಕ್ಷ ನಾಯಕನನ್ನು ಆಯ್ಕೆ ಮಾಡಲಾಗುತ್ತದೆ.

ಬಹುತೇಕ ಲಿಂಗಾಯಿತ ಸಮುದಾಯದವರಿಗೆ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಸ್ಥಾನ ನೀಡುವ ಸಾಧ್ಯತೆ ಇದೆ. ಬಸವರಾಜ ಬೊಮ್ಮಾಯಿ ಅವರ ಬದಲಿಗೆ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ವಿಪಕ್ಷ ನಾಯಕ ಸ್ಥಾನಕ್ಕೆ ಪರಿಗಣಿಸಲಾಗಿದೆ.

ಬಿಜೆಪಿ ಫೈರ್ ಬ್ರಾಂಡ್ ಖ್ಯಾತಿಯ ಬಸವನಗೌಡ ಪಾಟೀಲ್ ಯತ್ನಾಳ್ ವಿಪಕ್ಷ ನಾಯಕರಾಗಬಹುದು. ಇನ್ನು ಅವರ ಹೇಳಿಕೆ ವಿವಾದಕ್ಕೆ ಕಾರಣವಾಗುವ ಆತಂಕ ಕೂಡ ಇರುವುದರಿಂದ ಪಕ್ಷದ ವಲಯದಲ್ಲಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read