ಮೈಸೂರು: 2028ನೇ ಮುಖ್ಯಮಂತ್ರಿಯಾಗುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಚ್ಚರಿ ಹೇಳಿಕೆ ನೀಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಬಿಜೆಪಿ ರಿಪೇರಿಯಾದರೆ ಬಿಜೆಪಿ ಜೊತೆ ಇರುತ್ತೇನೆ. ಇಲ್ಲವಾದಲ್ಲಿ ನನ್ನದೇ ಹೊಸ ಪಕ್ಷ ಕಟ್ಟುತ್ತೇನೆ. 2028ಕ್ಕೆ ಚುನಾವಣೆಯಲ್ಲಿ ಸ್ಪರ್ಧಿಸಿ ನಾನೇ ಸಿಎಂ ಆಗುತ್ತೇನೆ ಎಂದು ಹೇಳಿದರು.
ಬಿಜೆಪಿ ನಾಯಕರು ನನ್ನ ಸಂಪರ್ಕದಲ್ಲಿದ್ದಾರೆ. ಪ್ರತಾಪ್ ಸಿಂಹ, ಜಾರಕಿಹೊಳಿ ಸೇರಿ ಒಂದು ಟೀಂ ಮಾಡಿದ್ದೇವೆ. ಭ್ರಷ್ಟಾಚಾರ ಮುಕ್ತ, ಕುಟುಂಬರಾಜಕಾರಣ ಮುಕ್ತ ಆಡಳಿತ ಗುರಿ ಹೊಂದಿದ್ದೇವೆ. ಪ್ರಾಮಾಣಿಕವಾಗಿ ರಾಜ್ಯದ ಜನತೆಗೆ ಉತ್ತಮ ಆಡಳಿತ ನೀಡುತ್ತೇವೆ ಎಂದರು.
ಹೊಂದಾಣಿಕೆ ರಾಜಕಾರಣ ಅಂತ್ಯವಾಗಲೆಂದು ಪ್ರಾರ್ಥನೆ ಮಾಡಿದ್ದೇನೆಬಿಜೆಪಿ ಕೆಲವರು ಕಾಂಗ್ರೆಸ್ ನಾಯಕರೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಹಾಗಾಗಿ ರಾಜ್ಯ ಬಿಜೆಪಿಯನ್ನು ರಿಪೇರಿ ಮಾಡುವ ಅಗತ್ಯವಿದೆ ಎಂದು ಹೇಳಿದರು