BREAKING NEWS: ವಿಜಯದಶಮಿ ವೇಳೆಗೆ ರಾಜ್ಯದಲ್ಲಿ ಹೊಸ ಪಕ್ಷ ರಚನೆ: ನೂತನ ಪಕ್ಷ ಕಟ್ಟುವ ಸುಳಿವು ನೀಡಿದ ಶಾಸಕ ಯತ್ನಾಳ್

ವಿಜಯಪುರ: ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಛಾಟನೆಗೊಂಡ ಬೆನ್ನಲ್ಲೇ ಆಕ್ಟೀವ್ ಆಗ್ರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ್ದಾರೆ.

ವಿಜಯಪುರ ಜಿಲ್ಲೆಯ ಸಿದ್ದೇಶ್ವರ ದೇಗುಲದಲ್ಲಿ ವಿಶೇಷ ಪೂಜೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಯತ್ನಾಳ್, ರಾಜ್ಯದಲ್ಲಿ ಹಿಂದೂ ಪಕ್ಷ ಕಟ್ಟುವ ಅನಿವಾರ್ಯತೆ ಇದೆ. ಇಂದಿನಿಂದ ರಾಜ್ಯಾದ್ಯಂತ ನಮ್ಮ ಹೋರಾಟ ಆರಂಭವಾಗಲಿದೆ ಎಂದು ಹೇಳಿದರು.

ಕುಟುಂಬ ರಾಜಕಾರಣ, ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತೇವೆ. ಯಡಿಯೂರಪ್ಪ, ವಿಜಯೇಂದ್ರ ಕುಟುಂಬ ರಾಜಕಾರಣ ತಡೆಯಬೇಕು. ವಿಜಯೇಂದ್ರರನ್ನು ಅಧ್ಯಕ್ಷರನ್ನಾಗಿ ಮುಂದುವರೆಸಿದರೆ ಅದು ಪಕ್ಷದ ಕರ್ಮ. ಎಂದು ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿ ಹೊಸ ಪಕ್ಷ ಅಸ್ತಿತ್ವಕ್ಕೆ ಬರಲಿದೆ. ಮುಂದಿನ ವಿಜಯದಶಮಿಗೆ ರಾಜ್ಯದಲ್ಲಿ ಹೊಸ ಪಕ್ಷ ರಚನೆಯಾಗಲಿದೆ ಎಂದು ಹೇಳಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read