HomeKarnatakaBIG NEWS: ನೀವು ಯಾರಿಗೆ ಹೇಳುವಿರೋ ಅವರಿಗೆ ಮತ ಹಾಕುವೆ ಎಂದ ಯತ್ನಾಳ್

BIG NEWS: ನೀವು ಯಾರಿಗೆ ಹೇಳುವಿರೋ ಅವರಿಗೆ ಮತ ಹಾಕುವೆ ಎಂದ ಯತ್ನಾಳ್

ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿಪಕ್ಷ ನಾಯಕ ಆರ್.ಅಶೋಕ್ ಅವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ.

ವಿಧಾನಸೌಧದಲ್ಲಿ ಆರ್.ಅಶೋಕ್ ಅವರನ್ನು ಭೇಟಿಯಾದ ಯತ್ನಾಳ್, ನೀವು ಯಾರಿಗೆ ಹೇಳುವಿರೋ ಅವರಿಗೆ ನಾನು ವೋಟ್ ಹಾಕುತ್ತೇನೆ ಎಂದಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಆರ್‌. ಅಶೋಕ್, ಬಿಜೆಪಿಯ ಮತದಾನದ ಕಾರ್ಯತಂತ್ರದ ಬಗ್ಗೆ ವಿವರ ನೀಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿಯ ಅಭ್ಯರ್ಥಿ ಗೆಲ್ಲಲು ಅಗತ್ಯವಿರುವಷ್ಟು ಮತಗಳನ್ನು ಪಕ್ಷ ಪಡೆದುಕೊಂಡಿದ್ದು, ಹೆಚ್ಚುವರಿ ಮತಗಳನ್ನು ಜೆಡಿಎಸ್‌ಗೆ ವರ್ಗಾಯಿಸಲಾಗಿದೆ ಎಂದು ಅವರು ತಿಳಿಸಿದರು. ಜೆಡಿಎಸ್‌ ಗೆಲ್ಲಬೇಕು ಎಂಬ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದರು. ಜೆಡಿಎಸ್‌ಗೆ ಮೊದಲ ಪ್ರಾಶಸ್ತ್ಯದ ಮತಗಳನ್ನು ನೀಡಲಾಗಿದೆ ಎಂದು ಖಚಿತಪಡಿಸಿದರು.

ಬಿಜೆಪಿ ಅಭ್ಯರ್ಥಿಯ ಎರಡನೇ ಪ್ರಾಶಸ್ತ್ಯದ ಎಲ್ಲ ಮತಗಳನ್ನೂ ಜೆಡಿಎಸ್‌ಗೆ ನೀಡಲಾಗಿದೆ ಎಂದು ಅವರು ಹೇಳಿದರು. ಬಿಜೆಪಿ ಶಾಸಕರ ಮತದಾನ ಪ್ರಕ್ರಿಯೆ ಸಂಪೂರ್ಣಗೊಂಡಿದ್ದು, ಕಾಂಗ್ರೆಸ್‌ನವರ ಮತದಾನ ಇನ್ನೂ ನಡೆಯುತ್ತಿದೆ ಎಂದರು.

ಉಚ್ಚಾಟಿತ ಶಾಸಕರ ಬಗ್ಗೆ ಮಾತನಾಡಿದ ಅಶೋಕ್, ಬಸನಗೌಡ ಪಾಟೀಲ್ ಯತ್ನಾಳ್ ತಮ್ಮನ್ನು ಎರಡು ಬಾರಿ ಸಂಪರ್ಕಿಸಿ, ಬಿಜೆಪಿಗೆ ಮತ ಹಾಕುವುದಾಗಿ ಘೋಷಿಸಿದ್ದಾರೆ ಎಂದು ತಿಳಿಸಿದರು. ಅವರು ಬಿಜೆಪಿಗೆ ಬೆಂಬಲ ನೀಡಲಿದ್ದಾರೆ. ಆದರೆ, ಎಸ್‌.ಟಿ. ಸೋಮಶೇಖರ್‌ ಮತ್ತು ಶಿವರಾಮ್ ಹೆಬ್ಬಾರ್ ಕುರಿತು ಪ್ರತಿಕ್ರಿಯಿಸಲು ಆರ್‌. ಅಶೋಕ್ ನಿರಾಕರಿಸಿದರು. ಅವರು ಕಾಂಗ್ರೆಸ್ ಜೊತೆ ಇರುವುದರಿಂದ, ಅವರ ಬಗ್ಗೆ ನೋ ಕಾಮೆಂಟ್ಸ್ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular