HomeKarnatakaBIG NEWS: ಯತ್ನಾಳ್ ಬಿಜೆಪಿಯಲ್ಲೇ ಮುಂದುವರಿತಾರೆ; ಹೊಸ ಪಕ್ಷದ ವಿಚಾರವಿಲ್ಲ; ಎಲ್ಲವನ್ನೂ ಸರಿಪಡಿಸುತ್ತೇವೆ ಎಂದ ರಮೇಶ್...

BIG NEWS: ಯತ್ನಾಳ್ ಬಿಜೆಪಿಯಲ್ಲೇ ಮುಂದುವರಿತಾರೆ; ಹೊಸ ಪಕ್ಷದ ವಿಚಾರವಿಲ್ಲ; ಎಲ್ಲವನ್ನೂ ಸರಿಪಡಿಸುತ್ತೇವೆ ಎಂದ ರಮೇಶ್ ಜಾರಕಿಹೊಳಿ

ಬೆಳಗಾವಿ: ಶಾಸಕ ಬಸಾಗೌಡ ಪಟೀಲ್ ಯತ್ನಾಳ್ ಬಿಜೆಪಿಯಿಂದ ಉಚ್ಛಾಟನೆ ದುರದೃಷ್ಟಕರ. ಹಾಗೆ ಮಾಡಬಾರದಿತ್ತು ಎಂದು ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಮೇಶ್ ಜಾರಕಿಹೊಳಿ, ಯತ್ನಾಳ್ ಹೊಸ ಪಕ್ಷ ಕಟ್ಟುವ ವಿಚಾರವಾಗಿ ಪ್ರತಿಕ್ರಿಯಿಸಿ, ಯತ್ನಾಳ್ ಹೊಸ ಪಕ್ಷದ ಬಗ್ಗೆ ಹೇಳಿದ್ದ ಉದ್ದೇಶವೇ ಬೇರೆ. ಆದರೆ ಮಾಧ್ಯಮಗಳಲ್ಲಿ ಬಂದಿರುವುದೇ ಬೇರೆ. ಹೊಸ ಪಕ್ಷ ಕಟ್ಟುವ ವಿಚಾರವಿಲ್ಲ ಎಂದು ಹೇಳಿದರು.

ಯತ್ನಾಳ್ ಬಿಜೆಪಿಯಲ್ಲಿಯೇ ಮುಂದುವರೆಯುತ್ತಾರೆ. ಎಲ್ಲಿಯೂ ಹೋಗಲ್ಲ. ಮೊನ್ನೆ ನಡೆದ ಶಾಸಕರ ಸಭೆಯಲ್ಲಿಯೂ ಚರ್ಚೆಯಾಗಿದೆ. ಪಕ್ಷಕ್ಕೆ ಮುಜುಗರ ತರುವಂತಹ ಹೇಳಿಕೆ ಕೊಡಬೇಡಿ ಎಂದು ಹೇಳಿದ್ದೇವೆ. ಯತ್ನಾಳ್ ಮತ್ತೆ ಬಿಜೆಪಿಗೆ ಬರುತ್ತಾರೆ ಎಂಬ ವಿಶ್ವಾಸವಿದೆ. ಎಲ್ಲವನ್ನೂ ಸರಿಪಡಿಸಲಾಗುವುದು ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular