ವಿಜಯಪುರ: ನಾನು ಪ್ರವಾದಿ ಮಹಮ್ಮದ್ ಪೈಗಂಬರ್ ಬಗ್ಗೆ ಮಾತನಾಡಿಲ್ಲ. ಮಹಮ್ಮದ್ ಅಲಿ ಜಿನ್ನಾ ಬಗ್ಗೆ ಮಾತನಡುತ್ತಿದ್ದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ.
ಮಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಯತ್ನಾಳ್, ನಾನು ಮಹಮ್ಮದ್ ಪೈಗಂಬರ್ ಬಗ್ಗೆ ಮಾತನಾಡಿಲ್ಲ. ಮಹಮ್ಮದ್ ಅಲಿ ಜಿನ್ನಾ ಬಗ್ಗೆ ಮಾತನಾಡುತ್ತಿದ್ದೆ. ಮಾತಿನಭರದಲ್ಲಿ ತಪ್ಪಾಗಿದೆ ಎಂದರು.
ವಿಜಯಪುರದಲ್ಲಿ ಬರೀ ಗೂಂಡಾಗಿರಿ, ಹಪ್ತಾಅ ವಸೂಲಿ ನಡೆಯುತ್ತಿದೆ. ಅದೆಲ್ಲ ಈಗ ನಿಂತಿದೆ. ದೇವರಿಗೆ ಬೈದಿದ್ದಾರೆ ಎಂದು ನೆಪ ಹೇಳುತ್ತಿದ್ದಾರೆ. ಹಿಂದೂ ಧರ್ಮದಲ್ಲಿ ಬೇರೆ ದೇವರ ಅವಹೇಳನ ಮಾಡುವುದನ್ನು ಕಲಿಸಲ್ಲ. ನಮ್ಮ ದೇವರ ಅವಮಾನ ಮಾಡಿದಾಗ ಹೇಗೆ ಮಾತನಡಬೇಕು? ಇದೊಂದು ಸಂಚು ಅಷ್ಟೇ. ಯತ್ನಾಳ್ ಮುಗಿಸಲು ಹೋದರೆ ರಾಜ್ಯದಲ್ಲಿ ಬೆಂಕಿ ಹೊತ್ತಿಕೊಳ್ಳುತ್ತೆ ಎಂದು ಹೇಳಿದರು.
ನನ್ನ ಮುಗಿಸಲು ಸಂಚು. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಇದರ ಹಿಂದೆ ಯಾರಿದ್ದಾರೆ ಎಂಬುದು ಸದ್ಯದಲ್ಲೇ ಹೊರಬರುತ್ತದೆ. ಈ ಬಗ್ಗೆ ಎನ್ ಐಎ ತನಿಖೆಯೂ ಆಗಲಿ ಎಂದು ಹೇಳಿದರು.