HomeLatest NewsBIG NEWS: ಆರ್.ಎಸ್.ಎಸ್ ನಿಷೇಧಕ್ಕೆ ಪ್ರಿಯಾಂಕ್ ಖರ್ಗೆ ಪತ್ರ: ಅವರ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ: ಯತ್ನಾಳ್...

BIG NEWS: ಆರ್.ಎಸ್.ಎಸ್ ನಿಷೇಧಕ್ಕೆ ಪ್ರಿಯಾಂಕ್ ಖರ್ಗೆ ಪತ್ರ: ಅವರ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ: ಯತ್ನಾಳ್ ಆಕ್ರೋಶ

ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆಯವರು ಆರ್.​ಎಸ್.​ಎಸ್​ ಚಟುವಟಿಕೆ ನಿಷೇಧದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ ಎಂಬ ವಿಚಾರಕ್ಕೆ ವಿಪಕ್ಷ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಇದೇ ವಿಚಾರವಾಗಿ ಪ್ರತಿಕ್ರಿಯಿಸಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಇದು ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ ಎಂದಿದ್ದಾರೆ.

ಸರ್ಕಾರಿ ಸ್ಥಳಗಳಲ್ಲಿ ನಡೆಸುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶಾಖೆಗಳನ್ನು, ಪಥಸಂಚಲನ, ಬೈಠಕ್ ಗಳನ್ನು ನಿಷೇಧಿಸಬೇಕೆಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯ ಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಜಗತ್ತಿನ ಅತ್ಯಂತ ದೊಡ್ಡ ಸ್ವಯಂಸೇವಕರ ಪಡೆ ಹೊಂದಿರುವ ಆರ್.ಎಸ್.ಎಸ್. ನ ನಿಷೇಧಕ್ಕೆ ಕರೆ ಕೊಟ್ಟಿರುವುದು ಇವರ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಕೃತಿ ವಿಕೋಪ, ರೈಲು ದುರಂತ, ಕೋವಿಡ್, ಅಪಘಾತಗಳು, ಭೂಕಂಪ, ನೆರೆಯಾದಾಗ ನೊಂದವರಿಗೆ ಮೊದಲು ಆಸರೆಯಾಗುವುದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸ್ವಯಂ ಸೇವಕರು. ಸೇವಾತತ್ಪರತೆ, ಸಮಾಜ ಸೇವೆ, ರಾಷ್ಟ್ರ ಪ್ರೇಮದ ಬಗ್ಗೆ ಜಾಗೃತಿ, ಶಿಸ್ತಿಗೆ ಮತ್ತೊಂದು ಹೆಸರೇ ರಾಷ್ಟ್ರೀಯ ಸ್ವಯಂ ಸೇವಕ ಸಂಘ. ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಹಗಲು ರಾತ್ರಿ ಎನ್ನದೇ ನಿಸ್ವಾರ್ಥ ಸೇವೆ ನೀಡುವ ಪ್ರಪಂಚದ ಏಕೈಕ ಸಂಘಟನೆಯಾಗಿದೆ. ಮನ ಮನೆಗಳನ್ನು ಬೆಸೆದುಕೊಳ್ಳುತ್ತಿರುವ ಸಂಘ ಚಿಂತನೆ ವ್ಯಾಪಿಸಿದ ಮತ್ತು ವ್ಯಾಪಿಸುತ್ತಿರುವ ರೀತಿ ಅನನ್ಯ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂಘವನ್ನು ನಿಷೇದ ಮಾಡಲು ಯಾರಿಂದಲೂ ಸಾಧ್ಯವಾಗಿಲ್ಲ. ವಿರೋಧಿಗಳು ಪ್ರೀತಿಸುವ, ಗೌರವಿಸುವ ಜಗತ್ತಿನ ಏಕೈಕ ಸಂಘಟನೆಯೇ ಆರ್.ಎಸ್.ಎಸ್. ರಾಜಕೀಯ ಪ್ರೇರಿತ ಹೇಳಿಕೆಗಳನ್ನು ಕೊಡುವುದನ್ನು ಬಿಟ್ಟು ಸ್ವಕ್ಷೇತ್ರವನ್ನು ಅಭಿವೃದ್ಧಿಗೊಳಿಸಲು ಪ್ರಿಯಾಂಕ್ ಖರ್ಗೆ ಅವರು ಶ್ರಮಿಸಲಿ. ಅಷ್ಟಕ್ಕೂ, ನಿಷೇಧಗೊಳಿಸಬೇಕಾಗಿದ್ದರೆ ಕೂಡಲೇ ಎಸ್.ಡಿ.ಪಿ.ಐ ನಂತ ದೇಶ ವಿರೋಧಿ ಸಂಘಟನೆಗಳನ್ನು ನಿಷೇದ ಮಾಡಲಿ. ಅನ್ಯ ಕೋಮಿನ ಹಬ್ಬಗಳಂದು ತಲ್ವಾರ್ ತೋರಿಸಿ ಬೀದಿಗಳಲ್ಲಿ ಹೆಲ್ಮೆಟ್ ಧರಿಸದೇ ಓಡಾಡುವ ಪುಂಡರ ಹೆಡೆಮುರಿಕಟ್ಟಲಿ ಎಂದು ಸಲಹೆ ನೀಡಿದ್ದಾರೆ.

ಬಕ್ರೀದ್ ಸೇರಿದಂತೆ ಇತರ ಹಬ್ಬಗಳಲ್ಲಿ ಆಗುವ ಪ್ರಾಣಿಬಲಿಯನ್ನು ನಿಷೇಧಿಸಲಿ. ಆಂಗ್ಲ, ವಿಜ್ಞಾನ, ಗಣಿತ, ಸಮಾಜ ಹೇಳಿಕೊಡದೆ ದ್ವೇಷ, ಬೇರೆ ಧರ್ಮಗಳ ಬಗ್ಗೆ ತಪ್ಪು ವಿಚಾರಗಳನ್ನು ಕಲಿಸುವ ಮದರಸಗಳನ್ನು ನಿಷೇದ ಮಾಡಲಿ ಎಂದಿದ್ದಾರೆ.

ಸ್ವಾತಂತ್ರ್ಯ ಬಂದು ಏಳು ದಶಕಗಳಾದರೂ ಅತ್ಯಂತ ಹಿಂದುಳಿದ ಜಿಲ್ಲೆ ಎಂದು ಕರೆಸಿಕೊಳ್ಳುವ ಹಾಗೂ ಅವರೇ ಪ್ರತಿನಿಧಿಸುವ ಕಲ್ಬುರ್ಗಿಯನ್ನು ಮಾದರಿ ಜಿಲ್ಲೆಯನ್ನಾಗಿ ಮಾಡಲಿ. ಅದನ್ನು ಬಿಟ್ಟು ಸಂಘದ ನಿಷೇಧ ಕನಸಿನ ಮಾತು ಎಂದು ಗುಡುಗಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular