HomeKarnataka8 ಬಿಜೆಪಿ ಸಂಸದರ ಟಿಕೆಟ್ ಬಗ್ಗೆ ಹೇಳಿಕೆ ನೀಡಿದ ಯತ್ನಾಳ್ ವಿರುದ್ಧ ಕರಡಿ ಸಂಗಣ್ಣ ಗರಂ

8 ಬಿಜೆಪಿ ಸಂಸದರ ಟಿಕೆಟ್ ಬಗ್ಗೆ ಹೇಳಿಕೆ ನೀಡಿದ ಯತ್ನಾಳ್ ವಿರುದ್ಧ ಕರಡಿ ಸಂಗಣ್ಣ ಗರಂ

ಕೊಪ್ಪಳ: ಮುಂದಿನ ಲೋಕಸಭೆ ಚುನಾವಣೆಗೆ ರಾಜ್ಯದ 8 ಜನ ಸಂಸದರು ಮತ್ತೆ ಟಿಕೆಟ್ ಕೇಳದೆ ಚುನಾವಣೆಯಿಂದ ಹಿಂದೆ ಸರಿಯುವ ಸಾಧ್ಯತೆ ಇದೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ನೀಡಿದ ಹೇಳಿಕೆಗೆ ಬಿಜೆಪಿ ಸಂಸದ ಸಂಗಣ್ಣ ಕರಡಿ ಗರಂ ಆಗಿದ್ದಾರೆ.

ಲೋಕಸಭೆ ಚುನಾವಣೆಗೆ ಇನ್ನೂ ಸಾಕಷ್ಟು ಸಮಯವಿದೆ. ಯತ್ನಾಳ್ ಅವರು, 8 ಜನ ಸಂಸದರಿಗೆ ಟಿಕೆಟ್ ಇಲ್ಲವೆಂದು ಹೇಳುತ್ತಿದ್ದಾರೆ. ಈ ರೀತಿ ಹೇಳಿಕೆ ನೀಡಿದ ಅವರ ವಿರುದ್ದ ಪಕ್ಷ ಕ್ರಮ ಕೈಗೊಳ್ಳಬೇಕು. ಯತ್ನಾಳ್ ಅವರಾಗಲಿ, ಯಾರಾಗಲಿ ಪಕ್ಷದ ವಿರುದ್ಧ ಮಾತನಾಡಬಾರದು. ಟಿಕೆಟ್ ವಿಚಾರವಾಗಿ ಯಾವುದೇ ಚರ್ಚೆ ನಡೆದಿಲ್ಲ. ಈ ಬಗ್ಗೆ ಹೇಳಿಕೆ ನೀಡಿದ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular