ಟಿಪ್ಪು ಸುಲ್ತಾನ್, ಔರಂಗಜೇಬ್ ವಿರುದ್ಧ ಅಸಂವಿಧಾನಿಕ ಪದ ಬಳಕೆ: ಯತ್ನಾಳ್ ವಿರುದ್ಧ ದೂರು

ಬಾಗಲಕೋಟೆ: ಟಿಪ್ಪು ಸುಲ್ತಾನ್ ಮತ್ತು ಔರಂಗಜೇಬ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಮುಧೋಳ ಠಾಣೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿದ್ದಾರೆ.

ಮುಧೋಳದಲ್ಲಿ ಗುರುವಾರ ಜನತಾ ಜನತಾ ರಾಜಾ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಯತ್ನಾಳ್ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಮೇಲೆ ದೂರು ದಾಖಲಾಗಿದೆ.

ಟಿಪ್ಪು ಸುಲ್ತಾನ್ ಮತ್ತು ಔರಂಗಜೇಬ್ ಅವರನ್ನು ಟೀಕಿಸುವ ಭರದಲ್ಲಿ ಯತ್ನಾಳ್ ಅಸಂವಿಧಾನಿಕ ಪದ ಬಳಸಿದ್ದಾರೆ. ಬಿಜೆಪಿ ಶಾಸಕ ರಾಜಾ ಸಿಂಗ್ ಠಾಕೂರ್ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರಿದ ಬಗ್ಗೆ ಗುಡುಗಿದ ಯತ್ನಾಳ್ ನನ್ನ ಮೇಲೆ 36 – 37 ಪ್ರಕರಣ ದಾಖಲಾಗಿವೆ ಎಂದು ಹೇಳಿದ್ದಾರೆ.

ಯತ್ನಾಳ್ ಅವರ ಹೇಳಿಕೆ ವಿರೋಧಿಸಿ ಮುಧೋಳ, ಇಳಕಲ್ ನಲ್ಲಿ ಶುಕ್ರವಾರ ಮುಸ್ಲಿಂ ಸಮುದಾಯದವರು ಪ್ರತಿಭಟನೆ ನಡೆಸಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read