HomeKarnatakaವಿಜಯೇಂದ್ರ ವಿರುದ್ಧ ಯತ್ನಾಳ್ ಮತ್ತೆ ಪರೋಕ್ಷ ವಾಗ್ದಾಳಿ

ವಿಜಯೇಂದ್ರ ವಿರುದ್ಧ ಯತ್ನಾಳ್ ಮತ್ತೆ ಪರೋಕ್ಷ ವಾಗ್ದಾಳಿ

ವಿಜಯಪುರ: ವೈಯಕ್ತಿಕ ಕೆಲಸದ ಮೇಲೆ ದೆಹಲಿಗೆ ಹೋಗಿದ್ದೆ. ಯಾರ ಭೇಟಿಗೂ ಹೋಗಿರಲಿಲ್ಲ, ಕಾರ್ಖಾನೆ ಕೆಲಸಕ್ಕೆ ಹೋಗಿದ್ದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ ಅವರು, ದೆಹಲಿಯಲ್ಲಿ ಶೋಭಾ ಕರಂದ್ಲಾಜೆ, ಪ್ರಹ್ಲಾದ್ ಜೋಶಿ ಹಾಗೂ ಕೆಲವು ಸಂಸದರನ್ನು ಭೇಟಿಯಾಗಿದ್ದೇನೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಜಯೇಂದ್ರ ಇದ್ದರೆ 35 ಲೋಕಸಭೆ ಸೀಟು ಬರುತ್ತದೆ ಎಂದು ಹೊಗಳಿ ನನಗೇನು? 28 ಕ್ಷೇತ್ರಗಳಿದ್ದರೂ 35 ಕ್ಷೇತ್ರ ಬರುತ್ತೆ ಎಂದು ಹೇಳಲಾಗುತ್ತಾ? ಇವರ ಮುಖ ನೋಡಿ ಯಾರೂ ಮತ ಹಾಕುವುದಿಲ್ಲ. ವಂಶವಾರು, ಭ್ರಷ್ಟಾಚಾರ ಅಡ್ಜಸ್ಟ್ ಮೆಂಟ್ ರಾಜಕಾರಣ ವಿರುದ್ಧ ನನ್ನ ಹೋರಾಟವಿದೆ. ನನಗೆ ಯಾರೂ ಬೈದಿಲ್ಲ, ಎಚ್ಚರಿಕೆಯನ್ನೂ ನೀಡಿಲ್ಲ ಎಂದು ವಿಜಯೇಂದ್ರ ವಿರುದ್ಧ ಬಿಜೆಪಿ ಶಾಸಕ ಯತ್ನಾಳ್ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular