HomeLatest NewsBIG NEWS: ಯತ್ನಾಳ್ ವಿರುದ್ಧ ಅವಹೇಳನಕಾರಿ ವಿಡಿಯೋ: ಯುವಕ ಅರೆಸ್ಟ್

BIG NEWS: ಯತ್ನಾಳ್ ವಿರುದ್ಧ ಅವಹೇಳನಕಾರಿ ವಿಡಿಯೋ: ಯುವಕ ಅರೆಸ್ಟ್

ಕೊಪ್ಪಳ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಅವಹೇಳನಕಾರಿ ವಿಡಿಯೋ ಹರಿಬಿಟ್ಟಿದ್ದ ಯುವಕನನ್ನು ಕೊಪ್ಪಳ ಜಿಲ್ಲೆಯ ಕನಕಗಿರಿ ಪೊಲೀಸರು ಬಂಧಿಸಿದ್ದಾರೆ.

ಹುಸೇನಿ ಬಂಧಿತ ಆರೋಪಿ. ಈತನ ವಿರುದ್ಧ ಹಲವು ಸೆಕ್ಷನ್ ಗಳ ಅಡಿ ಕೇಸ್ ದಾಖಲಾಗಿದೆ. ಕನಕಗಿರಿ ತಾಲೂಕಿನ ಮುಸಲಾಪುರ ಗ್ರಾಮದ ಯುವಕ ಹುಸೇನಿ, ಶಾಸಕ ಯತ್ನಾಳ್ ವಿರುದ್ಧ ಅವಹೇಳನಕಾರಿ ಮಾತನಾಡಿ ವಿಡಿಯೋ ಹರಿಬಿಟ್ಟಿದ್ದ. ವಿಡಿಯೋ ವೈರಲ್ ಆಗುತ್ತಿದ್ದಂತೆ ಗ್ರಾಮದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಯತ್ನಾಳ್ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದರು.

ಯತ್ನಾಳ್ ವಿರುದ್ಧ ಬಾಯಿಗೆ ಬಂದಂತೆ ಮಾತನಾಡಿದ್ದ ಹುಸೇನಿ ನೀನು ಬೂಟ್ ನೆಕ್ಕಿದ ವಂಶಸ್ಥ ಎಂದು ನಾಲಿಗೆ ಹರಿಬಿಟ್ಟಿದ್ದ. ವಿಡಿಯೋ ವೈರಲ್ ಆಗುತ್ತಿದ್ದಂತೆ ಮುಸಲಾಪುರ ಗ್ರಾಮದಲ್ಲಿ ಜಮಾವಣೆಗೊಂಡಿದ್ದ ಯತ್ನಾಳ್ ಬೆಂಬಲಿಗರು ಯುವಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದರು. ಸದ್ಯ ಯುವಕನನ್ನು ಬಂಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular