BIG NEWS: ಡಿಸಿಎಂ ಡಿ.ಕೆ.ಶಿವಕುಮಾರ್ ಒಂದು ಕಾಲು ಬಿಜೆಪಿಯಲ್ಲಿದ್ದಾರೆ: ಈಗಾಗಲೇ ದೆಹಲಿಯಲ್ಲಿ ಒಂದು ಸುತ್ತಿನ ಮಾತುಕತೆಯೂ ನಡೆದಿದೆ: ಹೊಸ ಬಾಂಬ್ ಸಿಡಿಸಿದ ಯತ್ನಾಳ್

ವಿಜಯಪುರ: ಡಿಸಿಎಂ ಡಿ.ಕೆ.ಶಿವಕುಮಾರ್ ಬಗ್ಗೆ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಡಿ.ಕೆ.ಶಿವಕುಮಾರ್ ಒಂದು ಕಾಲು ಬಿಜೆಪಿಯಲ್ಲಿ ಇಟ್ಟಿದ್ದಾರೆ ಎಂದು ಹೇಳಿದ್ದಾರೆ.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಯತ್ನಾಳ್, ಡಿಸಿಎಂ ಡಿ.ಕೆ.ಶಿವಕುಮಾರ್ ಒಂದು ಕಾಲು ಬಿಜೆಪಿಯಲ್ಲಿ ಇಟ್ಟಿದ್ದಾರೆ. ಬಿಜೆಪಿ ಜೊತೆ ಸಹ ಡಿ.ಕೆ.ಶಿವಕುಮಾರ್ ಒಂದು ಚರ್ಚೆ ಮಾಡಿದ್ದಾರೆ. ಈಗಾಗಲೇ ದೆಹಲಿಯಲ್ಲಿ ವಿಜಯೇಂದ್ರ ಜೊತೆ ಸೇರಿ ಒಂದು ಸುತ್ತಿನ ಚರ್ಚೆಯನ್ನೂ ನಡೆಸಿದ್ದಾರೆ. ಒಟ್ಟು 60ರಿಂದ 70 ಕಾಂಗ್ರೆಸ್ ಶಾಸಕರನ್ನು ಕರೆತಂದು… ಇದರ ಮುಂದುವರೆದ ಭಾಗವೇ ‘ನಮಸ್ತೇ ಸದಾ ವತ್ಸಲೇ’ ಹಾಡುತ್ತೇವೆ ಅಂತಾ ಹೇಳಿದ್ದಾರೆ ಎಂದರು.

ಈ ಮೂಲಕ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಕಡೆ 12 ಶಾಸಕರಿಲ್ಲ ಎಂದು ಆಂತರಿಕ ವರದಿ ಬಂದಿದೆ. ಎಲ್ಲಾ ಸಿದ್ದರಾಮಯ್ಯನವರ ಪರ ಇದ್ದಾರೆ. ಹಾಗಾಗಿ ಸರ್ಕಾರ ಮಾಡಲು ಪ್ರಯತ್ನಿಸಲ್ಲ ಅಂತಾ ಬಿಜೆಪಿ ಹೇಳಿತು ಎಂದು ಯತ್ನಾಳ್ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read