HomeLatest NewsBIG NEWS: ಎಫ್ಐಆರ್ ಗೆ ವಿಚಲಿತನಾಗುವ ಪ್ರಶ್ನೆಯೇ ಇಲ್ಲ: ಮದ್ದೂರಿನಿಂದಲೇ ಕಾಂಗ್ರೆಸ್ ಸರ್ಕಾರದ ಅಂತ್ಯ ಆರಂಭ:...

BIG NEWS: ಎಫ್ಐಆರ್ ಗೆ ವಿಚಲಿತನಾಗುವ ಪ್ರಶ್ನೆಯೇ ಇಲ್ಲ: ಮದ್ದೂರಿನಿಂದಲೇ ಕಾಂಗ್ರೆಸ್ ಸರ್ಕಾರದ ಅಂತ್ಯ ಆರಂಭ: ಯತ್ನಾಳ್ ಕಿಡಿ

ವಿಜಯಪುರ: ಪ್ರಚೋದನಕಾರಿ ಭಾಷಣ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ವಿಚಾರವಾಗಿ ಕಿಡಿಕಾರಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸರ್ಕಾರ ಎಷ್ಟೇ ಎಫ್ ಐ ಅರ್ ದಾಖಲಿಸಿದರೂ ನಾನು ವಿಚಲಿತನಾಗುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಹಿಂದೂಗಳ ಉತ್ಸವ, ಆಚರಣೆಗಳನ್ನು ಗುರಿಯಾಗಿಸಿಕೊಂಡು ಶಾಂತಿ ಕದಡುತ್ತಿರುವ ದುಷ್ಟ ಶಕ್ತಿಗಳ ಹೆಡೆಮುರುಕಟ್ಟಲು ರಾಜ್ಯ ಸರ್ಕಾರಕ್ಕೆ ಆಗುತ್ತಿಲ್ಲ. ಹೀಗಾಗಿ ಹಿಂದೂಗಳ ಹಕ್ಕನ್ನು ಪ್ರತಿಪಾದಿಸಿದ ನಮ್ಮಂತವರ ಮೇಲೆ ಕೇಸ್ ಹಾಕಲಾಗುತ್ತಿದೆ. ಹೆದರಿಸುವ ಪ್ರಯತ್ನಕ್ಕೆ ಜಗ್ಗುವ ಮಾತಿಲ್ಲ ಎಂದು ಗುಡುಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್ ಪಕ್ಷದ ಅಂತ್ಯ ಮದ್ದೂರಿನಿಂದಲೇ ಆರಂಭವಾಗಲಿದೆ. ಇದಕ್ಕೆ ಮದ್ದೂರಿನಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಹಿಂದೂಗಳೇ ಸಾಕ್ಷಿ ಎಂದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular