ಮಂಡ್ಯ: ರಾಜ್ಯ ಬಿಜೆಪಿ ಹೊಂದಾಣಿಕೆ ರಾಜಕಾರಣವನ್ನು ಕೈಬಿಡಬೇಕು. ನನ್ನನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳಬೇಕು ಎಂದು ಉಚ್ಛಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒತ್ತಾಯಿಸಿದ್ದಾರೆ.
ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಮಾತನಾಡಿದ ಶಾಸಕ ಯತ್ನಾಳ್, ಬಿಜೆಪಿಯವರು ನನ್ನನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳಬೇಕು. ಈ ಬಗ್ಗೆ ಸ್ಪಷ್ಟನೆ ನೀಡಲಿ. ಇಲ್ಲವಾದರೆ ನಾನೇ ಒಂದು ಹೊಸ ಪಕ್ಷವನ್ನು ಕಟ್ಟುತ್ತೇನೆ ಎಂದರು.
ನಾವು ಹಾಗೂ ಪ್ರತಾಪ್ ಸಿಂಹ ಸೇರಿ ಹೊಸ ಹಿಂದೂ ಪಕ್ಷವನ್ನು ಕಟ್ಟುತ್ತೇವೆ. ಬಿಜೆಪಿಯವರುರು ನನ್ನನ್ನು ಗೌರವದಿಂದ ವಾಪಸ್ ಕರೆಸಿಕೊಳ್ಳಲಿ. ಇಲ್ಲವಾದಲ್ಲಿ ಹೊಸ ಹಿಂದೂ ಪಕ್ಷ ಕಟ್ಟುತ್ತೇವೆ ಎಂದು ಹೇಳಿದರು.